ಪಿಲಿಪ್ಪೆನ್ಸ್ ನಲ್ಲಿ ಶುಕ್ರವಾರ 7.6 ತೀವ್ರತೆಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ. ಸುನಾಮಿ ಭೀತಿ ಆವರಿಸಿದ ಹಿನ್ನೆಲೆಯಲ್ಲಿ ಕರಾವಳಿ ತೀರದ ಜನರನ್ನು ಸ್ಥಳಂತರಿಸಲಾಗಿದೆ.
ಹವಾಯಿ ಮೂಲದ ಪೆಸಿಫಿಕ್ ಸುನಾಮಿ ಕೇಂದ್ರ ಸುನಾಮಿ ಎಚ್ಚರಿಕೆ ನೀಡಿದೆ. ಅಲ್ಲದೇ ಕರಾವಳಿ ತೀರದ ಜನರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ಇತರೆ ಕೇಂದ್ರಗಳಿಗೆ ಸೂಚಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ 9.43ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, 20 ಅಡಿ ಆಳದಲ್ಲಿ ಕೇಂದ್ರೀಕೃತವಾದ ಭೂಕಂಪನ ರಿಕ್ಟರ್ ಮಾಪಕದಲ್ಲಿ 7.6 ತೀವ್ರತೆ ದಾಖಲಿಸಿದೆ.
ಭೂಕಂಪನದಿಂದ ಜನರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಜನರಲ್ಲಿ ಭೀತಿ ವಾತಾವರಣ ಸೃಷ್ಟಿಯಾಗಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ಯಾವುದೇ ದೊಡ್ಡ ಪ್ರಮಾಣದಲ್ಲಿ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ಕೆಲವು ಕಟ್ಟಡಗಳಿಗೆ ಹಾನಿಯಾಗಿರುವ ವರದಿ ಆಗಿದೆ. ಆದರೆ ಸಾವು-ನೋವುಗಳು ಸಂಭವಿಸಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Patients and staff seen evacuating the Tagum City Davao Regional Medical Center in the Philippines amid intense shaking caused by magnitude 7.6 earthquake. pic.twitter.com/melwzIQdCy
— Noteworthy News (@newsnoteworthy) October 10, 2025



