ಬೆಂಗಳೂರು: ಕಾಳೆನ ಅಗ್ರಹಾರದಿಂದ ತಾವರೆಕೆರೆಯವರೆಗಿನ 7.5 ಕಿ.ಮೀ. ಉದ್ದದ ಗುಲಾಬಿ ಮಾರ್ಗದಲ್ಲಿ (ಸುಮಾರು 7.5 ಕಿಮೀ ಉದ್ದ) ರೋಲಿಂಗ್ ಸ್ಟಾಕ್ ಪರೀಕ್ಷೆಗಳನ್ನು ಜನವರಿ 11ರಂದು ನಡೆಯಲಿದೆ.
ಬಿಎಂಆರ್ ಸಿಎಲ್ ಸಂಸ್ಥೆ ಶನಿವಾರ ಬಿಡುಗಡೆ ಮಾಡಿದ ಮಾಧ್ಯಮ ಹೇಳಿಕೆಯಲ್ಲಿ ಭಾನುವಾರದಿಂದ (ಜನವರಿ 11) ಏಪ್ರಿಲ್ ಮಧ್ಯಭಾಗದವರೆಗೆ ಪರೀಕ್ಷೆಗಳನ್ನು ನಡೆಸಲಿದೆ ಎಂದು ತಿಳಿಸಿದೆ.
ಈ ಮುಖ್ಯ ಪರೀಕ್ಷೆಗಳು (Main Line Testing) ವಾಣಿಜ್ಯ ಸಂಚಾರ ಮಾಡುವ ಮೊದಲು ಕೈಗೊಳ್ಳಲಾಗುವ ಅತ್ಯಂತ ಮಹತ್ವದ ಚಟುವಟಿಕೆಯಾಗಿದ್ದು, ನೈಜ ಕ್ಷೇತ್ರ ಪರಿಸ್ಥಿತಿಗಳಲ್ಲಿ ರೈಲುಗಳ ಕಾರ್ಯಕ್ಷಮತೆ ಹಾಗೂ ವ್ಯವಸ್ಥೆಗಳ ಪರಸ್ಪರ ಸಂಯೋಜನೆಯ ಸಮಗ್ರ ಪರಿಶೀಲನೆಯನ್ನು ಒಳಗೊಂಡಿರುತ್ತದೆ. ಶಾಸನಬದ್ದ ಅನುಮೋದನೆಗಳನ್ನು ಪಡೆಯಲು ಈ ಪರೀಕ್ಷೆಗಳು ಅಗತ್ಯವಾಗಿದೆ.
ಮೇಲ್ಕಂಡ ಅವಧಿಯಲ್ಲಿ ಟ್ರಾಕ್ಷನ್ ಮತ್ತು ಬ್ರೇಕ್, ಆಸಿಲೇಷನ್ (Oscillation), ಸಿಗ್ನಲಿಂಗ್, ವಿದ್ಯುತ್ ಮತ್ತು ದೂರಸಂಪರ್ಕ ವ್ಯವಸ್ಥೆಗಳೊಂದಿಗೆ ಏಕೀಕರಣ (Integration) ಸೇರಿದಂತೆ ಹಲವು ಪರೀಕ್ಷೆಗಳು ನಡೆಸಲಾಗುತ್ತವೆ.
ಇದು ಗುಲಾಬಿ ಮಾರ್ಗದಲ್ಲಿನ ಯೋಜನೆಯ ಮಹತ್ವದ ಮೈಲಿಗಲ್ಲಿನತ್ತ ಸಾಗುತ್ತಿರುವುದನ್ನು ಸೂಚಿಸುತ್ತದೆ. ಸಾರ್ವಜನಿಕ ಸೇವೆಗೆ ಸದರಿ ಮಾರ್ಗ ತೆರೆಯುವ ಮೊದಲು ಅತ್ಯುನ್ನತ ಮಟ್ಟದ ಸುರಕ್ಷತೆ ಮತ್ತು ವಿಶ್ವಾಸಾರ್ಹತೆಯನ್ನು ಖಚಿತಪಡಿಸಿಕೊಳ್ಳಲು ಬಿಎಂಆರ್‌ಸಿಎಲ್ ಸದಾ ಬದ್ಧವಾಗಿದೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



