Thursday, May 14, 2026
Google search engine
Homeರಾಜ್ಯರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಆದೇಶ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಿ ಆದೇಶ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಕಳಪೆ ಗುಣಮಟ್ಟದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಇನ್ನೆರಡು ದಿನದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೆಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಟೆಲ್ ಹಾಗೂ ಇನ್ನಿತರ ಕಡೆಗಳಲ್ಲಿ ಆಹಾರ ಸಿದ್ಧಪಡಿಸಲು ಪ್ಲಾಸ್ಟಿಕ್ ಗಳನ್ನು ಬಳಸಲಾಗುತ್ತಿದೆ. ಕಳಪೆ ಗುಣಮಟ್ಟದ ಪ್ಲಾಸ್ಟಿಕ್ ಗಳಲ್ಲಿ ಕ್ಯಾನ್ಸರ್ ಅಂಶಗಳು ಇರುವುದರಿಂದ ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗುವುದು ಎಂದರು.

ಹೋಟೆಲ್ ಗಳಲ್ಲಿ ಇಡ್ಲಿ ಸಿದ್ಧಪಡಿಸುವ ಕುರಿತು ಸಾಕಷ್ಟು ದೂರುಗಳು ಬಂದಿದ್ದು, ಈ ಬಗ್ಗೆ ರಾಜ್ಯಾದ್ಯಂತ ೨೫೧ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ೫೧ ಮಾದರಿಗಳಲ್ಲಿ ಅಪಾಯಕಾರಿ ಕಾರ್ಸೊಜೆನಿಕ್ ರಾಸಾಯನಿಕ ಅಂಶಗಳು ಪತ್ತೆಯಾಗಿವೆ. ಇದು ಆರೋಗ್ಯಕ್ಕೆ ಹಾನಿಕಾರಕ ರಾಸಾಯನಿಕವಾಗಿದೆ ಎಂದರು.

ಹೋಟೆಲ್ ಗಳಲ್ಲಿ ಈ ಹಿಂದೆ ಇಡ್ಲಿ ಸಿದ್ಧಪಡಿಸಲು ಬಟ್ಟೆ ಬಳಸಲಾಗುತ್ತಿತ್ತು. ಆದರೆ ಇದೀಗ ಪ್ಲಾಸ್ಟಿಕ್ ಗಳನ್ನು ಕೆಲವು ಕಡೆ ಬಳಸಲಾಗುತ್ತಿದೆ. ಈ ಪ್ಲಾಸ್ಟಿಕ್ ಗಳಲ್ಲಿ ಕಾರ್ಸೊಜೆನಿಕ್ ರಾಸಾಯನಿಕ ಅಂಶಗಳು ಇದ್ದು, ಇವು ಕ್ಯಾನ್ಸರ್ ಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಳಪೆ ಗುಣಮಟ್ಟದ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments