Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ತಾಜಾ ಸುದ್ದಿ

ಬನ್ನೇರುಘಟ್ಟದಲ್ಲಿ ದೇಶದಲ್ಲೇ ಅತೀ ದೊಡ್ಡ ಚಿರತೆ ಸಫಾರಿಗೆ ಸಚಿವ ಈಶ್ವರ ಖಂಡ್ರೆ ಚಾಲನೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 31 ವೀಕ್ಷಣೆಗಳು

ಬನ್ನೇರುಘಟ್ಟ ಉದ್ಯಾನದಲ್ಲಿ ನೂತನವಾಗಿ ನಿರ್ಮಿಸಿರುವ ದಕ್ಷಿಣ ಭಾರತದ ಪ್ರಥಮ ಮತ್ತು ದೇಶದಲ್ಲಿಯೇ ಅತಿ ದೊಡ್ಡ ಚಿರತೆ ಸಫಾರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದ್ದಾರೆ.

ಬೆಂಗಳೂರು ಹೊರವಲಯದಲ್ಲಿರುವ ಬನ್ನೇರುಘಟ್ಟದಲ್ಲಿ ಬುಧವಾರ ಚಿರತೆ ಸಫಾರಿ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಹುಲಿ ಸಫಾರಿ, ಸಸ್ಯಹಾರಿ ಪ್ರಾಣಿಗಳ ಸಫಾರಿ, ಸಿಂಹ ಸಫಾರಿ, ಕರಡಿ ಸಫಾರಿ ಇರುವ ಬನ್ನೇರುಘಟ್ಟ ಉದ್ಯಾನದಲ್ಲಿ 8  ಚಿರತೆಗಳನ್ನು ತೆರೆದ ಕಾಡಿನಲ್ಲಿ ಸಫಾರಿಗೆ ಬಿಡಲಾಗಿದೆ. ಇದು ಈ ಉದ್ಯಾನದ ಮತ್ತೊಂದು ಆಕರ್ಷಣೆಯಾಗಿದ್ದು, ಪ್ರವಾಸಿಗರು ಮತ್ತು ಸಂದರ್ಶಕರನ್ನು ಸೆಳೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚಿರತೆ ಸಫಾರಿ ಪ್ರದೇಶವು ನೈಸರ್ಗಿಕ ಬಂಡೆಗಳಿಂದ ಹಾಗೂ ಅರೆ-ಎಲೆ ಉದುರುವ ಕಾಡುಗಳಿಂದ ಕೂಡಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರದ ಮಾರ್ಗಸೂಚಿಗಳ ಪ್ರಕಾರ, 20 ಹೆಕ್ಟೇರ್ ಪ್ರದೇಶವನ್ನು ಗುರುತಿಸಿ ರೈಲ್ವೆ ಬ್ಯಾರಿಕೇಡ್ ಹಾಕಲಾಗಿದೆ. ಒಟ್ಟು 4.5 ಕೋಟಿ ರೂ. ವೆಚ್ಚದಲ್ಲಿ ಸುರಕ್ಷಿತ ವಿನ್ಯಾಸ ರೂಪಿಸಲಾಗಿದೆ. ಈ ಇಡೀ ಪ್ರದೇಶಕ್ಕೆ 4.5 ಮೀಟರ್ ಎತ್ತರದ ಲಂಬ ಚೈನ್ ಲಿಂಕ್ ಜಾಲರಿ ಅಳವಡಿಸಲಾಗಿದ್ದು, ಎಂಎಸ್ ಶೀಟ್ ಗಳನ್ನು 1.5 ಮೀಟರ್ ಎತ್ತರವಿರುವ 30ಡಿಗ್ರಿ ಇಳಿಜಾರಿನ ಕೋನದಲ್ಲಿ ಹಾಕುವ ಮೂಲಕ ಚಿರತೆಗಳು ಹೊರಗೆ ಬಾರದಂತೆ ಎಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.

ಬನ್ನೇರುಘಟ್ಟ ಸುತ್ತ ಮುತ್ತ ಬೆಟ್ಟಗುಡ್ಡಗಳಿದ್ದು, ಇದು ಚಿರತೆಗಳು ವಾಸಿಸಲು ಉತ್ತಮ ತಾಣವಾಗಿದೆ. ಹೀಗಾಗಿಯೇ ಇಲ್ಲಿ ಹೆಚ್ಚಿನ ಸಂಖ್ಯೆ ಚಿರತೆಗಳೂ ಇವೆ. ಈ ಪೈಕಿ ಹೊಲ, ಗದ್ದೆಗಳಲ್ಲಿ ಹೆಣ್ಣು ಚಿರತೆಗಳು ಮರಿ ಹಾಕಿ ಹೋಗುವ ಸಂದರ್ಭದಲ್ಲಿ ಅಂತಹ ಮರಿಗಳನ್ನು ತಂದು ಉದ್ಯಾನದಲ್ಲಿ ಪಾಲನೆ ಮಾಡಲಾಗುತ್ತದೆ. ಪ್ರಸ್ತುತ ಉದ್ಯಾನದಲ್ಲಿ 14 ಚಿರತೆಗಳಿವೆ ಎಂದೂ ಮಾಹಿತಿ ನೀಡಿದರು. ಸ್ವಾಗತ ಕಮಾನನ್ನೂ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ. ಸುನೀಲ್ ಪನ್ವಾರ್, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯ ನಿರ್ವಾಹಕ ನಿರ್ದೇಶಕ ಎ.ವಿ. ಸೂರ್ಯಸೇನ್ ಮತ್ತಿತರರು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment