ಹೆಚ್ಚು ದರ ವಸೂಲಿ ಮಾಡಿ ಕಾಳಸಂತೆಯಲ್ಲಿ ಗೃಹ ಬಳಕೆ, ವಾಣಿಜ್ಯ ಬಳಕೆ, ಆಟೋ ಎಲ್ಪಿಜಿಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ, ಪರವಾನಗಿ ರದ್ದುಗೊಳಿಸುವ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದ್ದು, ಎಲ್ ಪಿಜಿ ಪೂರೈಕೆ, ವಿತರಣೆ, ದರ ನಿಯಂತ್ರಣ ಮತ್ತು ದುರುಪಯೋಗ ತಡೆ ಕುರಿತು ನಿರಂತರ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಕಾಳಸಂತೆ ಮಾರಾಟ ತಡೆಗಟ್ಟಲು ದಾಳಿ ಮತ್ತು ಪರಿಶೀಲನೆಗಳನ್ನು ಹೆಚ್ಚಿಸಲಾಗಿದೆ. ಭಾರತ ಸರ್ಕಾರದಿಂದ ಹೆಚ್ಚುವರಿ ಸಿಲಿಂಡರ್ ಪೂರೈಕೆ ದೊರೆತಿರುವುದರಿಂದ ರಾಜ್ಯದಲ್ಲಿ ಎಲ್.ಪಿ.ಜಿ ಪೂರೈಕೆ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಗಮನಾರ್ಹವಾಗಿ ಸುಧಾರಿಸುವ ನಿರೀಕ್ಷೆ ಇದೆ ಎಂದಿದ್ದಾರೆ.
ಆಟೋ ಎಲ್ ಪಿಜಿ ಕೊರತೆ ಇಲ್ಲ
ಆಟೋ ಎಲ್ಪಿಜಿಗೆ ಯಾವುದೇ ರೀತಿಯ ಕೊರತೆ ಇಲ್ಲ.ಆಟೋ ಎಲ್‌ಪಿಜಿ ಪೂರೈಕೆಯನ್ನು ರಾಜ್ಯ ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ ಎಂದು ಸಚಿವರು ತಿಳಿಸಿದರು.
ಪ್ರಸ್ತುತ ಈ ಸಂಸ್ಥೆಗಳು ಪ್ರತಿ ಲೀಟರ್‌ಗೆ ರೂ. 77.74 ರ ದರದಲ್ಲಿ ಆಟೋ ಎಲ್‌ಪಿಜಿ ಪೂರೈಸುತ್ತಿವೆ. ಕಳೆದ ವಾರದಲ್ಲಿ ದಿನಕ್ಕೆ ಸರಾಸರಿ 64.9 ಮೆಟ್ರಿಕ್ ಟನ್ ಆಟೋ ಎಲ್‌ಪಿಜಿಯನ್ನು ವಿತರಿಸಲಾಗಿದೆ. ಸಂಘರ್ಷದ ಮೊದಲು ಈ ಪ್ರಮಾಣವು ದಿನಕ್ಕೆ 57.6 ಮೆಟ್ರಿಕ್ ಟನ್ ಇತ್ತು. ಇದು ಪೂರೈಕೆಯಲ್ಲಿನ ಗಮನಾರ್ಹ ಹೆಚ್ಚಳವನ್ನು ತೋರಿಸುತ್ತದೆ ಎಂದು ಅವರು ವಿವರಿಸಿದರು.



