Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

2000 ಲೈನ್‌ಮೆನ್‌ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ ಪ್ರಕಟ: ಸಚಿವ ಕೆಜೆ ಜಾರ್ಜ್ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 2 ವೀಕ್ಷಣೆಗಳು
KJ George
KJ George

ರಾಯಚೂರು: ಇಂಧನ ಇಲಾಖೆಗೆ ಸದ್ಯದಲ್ಲೇ 2000 ಲೈನ್‌ಮೆನ್‌ಗಳ ನೇಮಕ ಆಗಲಿದ್ದು, ಈ ಸಂಬಂಧ 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ.

ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿದ ಇಂಧನ ಸಚಿವರು, ಲೈನ್‌ಮೆನ್ ಗಳ ಹುದ್ದೆಗೆ ರಾಜ್ಯಾದ್ಯಂತ ಒಂದೇ ದಿನ ನೇಮಕ ಪ್ರಕ್ರಿಯೆ ನಡೆಯಲಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗುತ್ತದೆ ಎಂದರು.

ವೈಟಿಪಿಎಸ್ ಹುದ್ದೆಗಳನ್ನು ಭರ್ತಿ ಮಾಡುವಾವಾಗ ಸ್ಥಳಿಯರಿಗೆ ಆದ್ಯತೆ ನೀಡಬೇಕು ಮತ್ತು 371 ಜೆ ಅನ್ವಯ ಮೀಸಲು ನೀಡಬೇಕು. ಆದರೆ ನುರಿತ ಕೆಲಸಗಾರರು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಸ್ಥಳೀಯರ ನೇಮಕ ಆಗುತ್ತಿಲ್ಲ ಎಂಬ ಮಾತು ಕೇಳಿಬಂದಿದೆ. ಆದ್ದರಿಂದ ಎಷ್ಟು ಜನ ಬೇಕು ಅಂತ ನಿರ್ಧರಿಸಿ, ಅವರಿಗೆ ಕೆಪಿಸಿಎಲ್‌ನಿಂದ ಅಗತ್ಯ ತರಬೇತಿ ಕೊಡಿಸಲು ಅಗತ್ಯ ಕ್ರಮ ವಹಿಸಲಾಗುವುದು. ನಮ್ಮ ರಾಜ್ಯದ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ, ಆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತದೆ ಎಂದು ತಿಳಿಸಿದರು.

ಈಗಾಗಲೇ 1000 ಸಹಾಯಕ ಇಂಜಿನಿಯರ್‌ಗಳ (ಎಇ), ಕಿರಿಯ ಇಂಜಿನಿಯರ್‌ಗಳ (ಜೆಇ) ನೇಮಕ ಮಾಡಿ ಕಾರ್ಯಾದೇಶವನ್ನೂ ನೀಡಿದ್ದೇವೆ. ಇಂಧನ ಇಲಾಖೆಗೆ ಹೊಸದಾಗಿ ನೇಮಕಗೊಂಡಿರುವ 400 ಸಹಾಯಕ ಇಂಜಿನಿಯರ್‌ಗಳಿಗೆ ಇತ್ತೀಚೆಗೆ ಕಾರ್ಯಾನುಭವ ತರಬೇತಿ ನೀಡಲಾಗಿದೆ. ತ್ವರಿತ ನೇಮಕಾತಿಗಾಗಿ ಈ ಅಭ್ಯರ್ಥಿಗಳು ನನಗೆ ಮನವಿ ಸಲ್ಲಿಸಿದ್ದರು. ಇಲಾಖೆಯ ಹಿರಿಯ ಅಧಿಕಾರಳ ನಿರಂತರ ಪ್ರಯತ್ನದಿಂದ 6 ತಿಂಗಳೊಳಗೆ ನೇಮಕ ಆದೇಶ ನೀಡಲಾಗಿದೆ,” ಎಂದು ಅವರು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment