Saturday, 31 October 2026 — Kannadavahini
BREAKING NEWS
ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ಮನರಂಜನೆ ಇಂದಿನಿಂದ 3 ದಿನ ಜೀ ಕನ್ನಡದಲ್ಲಿ ಕುಟುಂಬ ಅವಾರ್ಡ್ಸ್ ಸಂಭ್ರಮ! ರಾಜ್ಯ ಹಾಸನಾಂಬೆ ಗರ್ಭಗುಡಿ ಓಪನ್: ನಾಳೆಯಿಂದ ಸಾರ್ವಜನಿಕರಿಗೆ ದರ್ಶನ ರಾಜ್ಯ ನ.1ರಿಂದ ಹಾಲು, ಸಾರಿಗೆ ದರ ಏರಿಕೆ: ದೀಪಾವಳಿಗೆ ರೈತರಿಗೆ ಸಿಹಿ, ಜನರಿಗೆ ದುಬಾರಿ! ಅಪರಾಧ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಕಟ್ಟುಕಥೆ: ಸಿಸಿಬಿ ತನಿಖೆಯಲ್ಲಿ ಪತ್ತೆ ರಾಜ್ಯ ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ
ಕ್ರೀಡೆ

ಬಿಸಿಸಿಐ ಅಧ್ಯಕ್ಷರಾಗಿ ಸಿಎಸ್‌ ಕೆ ಮಾಜಿ ಆಟಗಾರ ಮಿಥುನ್‌ ಮನ್ಹಾಸ್‌ ನೇಮಕ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 3 ವೀಕ್ಷಣೆಗಳು
mithun manhas

ದೆಹಲಿ ತಂಡದ ನಾಯಕ ಹಾಗೂ ಐಪಿಎಲ್‌ ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಮಾಜಿ ಆಟಗಾರ ಮಿಥುನ್‌ ಮನ್ಹಾಸ್‌ ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಮಾಜಿ ಆಲ್‌ ರೌಂಡರ್‌ ರೋಜರ್‌ ಬಿನ್ನಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಿಥುನ್‌ ಮನ್ಹಾಸ್‌ ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡಿದ್ದ ರಾಜೀವ್‌ ಶುಕ್ಲ ಉಪಾಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

157 ಪ್ರಥಮ ದರ್ಜೆ ಕ್ರಿಕೆಟ್‌ ಪಂದ್ಯಗಳನ್ನು ಆಡಿರುವ ಮಿಥುನ್‌ ಮೂರು ಆವೃತ್ತಿಗಳಲ್ಲಿ ಐಪಿಎಲ್‌ ನಲ್ಲಿ ಆಡಿದ್ದಾರೆ. ಅತ್ಯಂತ ಪ್ರಭಾವಿ ವ್ಯಕ್ತಿಗಳು ಅಲಂಕರಿಸುವ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಹೆಚ್ಚಾಗಿ ಪ್ರಭಾವಿಗಳ ನಡುವೆ ಪೈಪೋಟಿ ನಡುವೆ ಮಿಥುನ್‌ ೩೭ನೇ ಅಧ್ಯಕ್ಷರಾಗಿ ನೇಮಕಗೊಂಡಿರುವುದು ಅಚ್ಚರಿ ಮೂಡಿಸಿದೆ.

ಇದೇ ವೇಳೆ ಬಿಸಿಸಿಐ ಆಯ್ಕೆ ಸಮಿತಿಗೆ ಇಬ್ಬರನ್ನು ನೇಮಕ ಮಾಡಲಾಗಿದೆ. ಅಜಿತ್‌ ಅಗರ್ಕರ್‌ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಮುಂದುವರಿಯಲಿದ್ದು, ಮಾಜಿ ಬೌಲರ್‌ ಆರ್‌ ಪಿ ಸಿಂಗ್‌ ಮತ್ತು ಪ್ರಗ್ಯಾನ್‌ ಓಜಾ ಹೊಸದಾಗಿ ಆಯ್ಕೆ ಸಮಿತಿಗೆ ಸೇರ್ಪಡೆಯಾಗಿದ್ದಾರೆ.

ಮಿಥುನ್‌ ಮನ್ಹಾಸ್‌ ಪ್ರಥಮ ದರ್ಜೆ ಕ್ರಿಕೆಟ್‌ ನಲ್ಲಿ 27 ಶತಕ ಸೇರಿದಂತೆ 9714 ರನ್‌ ಗಳಿಸಿದ್ದಾರೆ. ಎ ದರ್ಜೆ ಕ್ರಿಕೆಟ್‌ ನಲ್ಲಿ 4126 ರನ್‌ ಬಾರಿಸಿದ್ದಾರೆ. ಮೂರು ವರ್ಷಗಳ ಐಪಿಎಲ್‌ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌, ಪುಣೆ ವಾರಿಯರ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಪರ ಆಡಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8396 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment