Thursday, November 21, 2024
Google search engine
Homeತಾಜಾ ಸುದ್ದಿ3ನೇ ಬಾರಿ ಪ್ರಧಾನಿಯಾಗಿ ಮೋದಿ 100 ದಿನಗಳ ಸಾಧನೆಯ ಪುಸ್ತಕ ಬಿಡುಗಡೆ!

3ನೇ ಬಾರಿ ಪ್ರಧಾನಿಯಾಗಿ ಮೋದಿ 100 ದಿನಗಳ ಸಾಧನೆಯ ಪುಸ್ತಕ ಬಿಡುಗಡೆ!

ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಸಾಧನೆಗಳ ಪುಸಕ್ತ ಬಿಡುಗಡೆ ಮಾಡಿದ್ದಾರೆ.

ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಸಾಧನೆಗಳ ಪಟ್ಟಿ ಹೊಂದಿರುವ ಪುಸಕ್ತ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದಲ್ಲಿ 100 ದಿನಗಳ ಆಡಳಿತದಲ್ಲಿ ಮಹತ್ವದ ಸಾಧನೆ ಮಾಡಲಾಗಿದೆ ಎಂದರು.

ದೇಶದಲ್ಲಿ ಆಂತರಿಕ ಭದ್ರತೆ ಹೆಚ್ಚಿಸಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಪ್ರಮಾಣದ ವೇಗ ಹೆಚ್ಚಾಗಿದೆ. ಯುನಿಫೈಡ್ ವಿಮಾ ಯೋಜನೆ ಜಾರಿಗೆ ತರಲಾಗಿದೆ. ರೈಲ್ವೆ ಹಾಗೂ ರಸ್ತೆ ಸಾರಿಗೆ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.

ದೇಶದಲ್ಲಿ ಇದುವರೆಗೆ 15 ಲಕ್ಷ ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. 3 ಹೊಸ ಮೆಟ್ರೋ ಲೈನ್ ಆರಂಭಿಸಲಾಗಿದೆ. ರೈತರ ಅಭಿವೃದ್ಧಿಗಾಗಿ ಹಲವು ಯೋಜನೆ ಜಾರಿಗೆ ತರಲಾಗಿದೆ ಎಂದು ಶಾ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments