ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಅತ್ಯಂತ ಮಹತ್ವದ ವಾರ್ಷಿಕ ‘ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಸಭೆ’ಗೆ ಈ ಬಾರಿ ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿ ಆತಿಥ್ಯ ವಹಿಸಲಿದೆ.
ಈ ಹಿನ್ನೆಲೆಯಲ್ಲಿ ಸಂಘದ ಸರಸಂಘಚಾಲಕರಾದ ಡಾ. ಮೋಹನ್ ಭಾಗವತ್ ಅವರು ಜುಲೈ 6ರಂದು ಬೆಳಗಾವಿಗೆ ಆಗಮಿಸಲಿದ್ದು, ಸತತ ಎಂಟು ದಿನಗಳ ಕಾಲ ಇಲ್ಲೇ ವಾಸ್ತವ್ಯ ಹೂಡಲಿದ್ದಾರೆ ಎಂದು ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನೀಲ್ ಅಂಬೇಕರ್ ತಿಳಿಸಿದ್ದಾರೆ.
ಸಂಘದ ವಿವಿಧ ಸ್ತರದ ಸ್ವಯಂಸೇವಕರ ಸಭೆಗಳು ಜುಲೈ 6ರಿಂದಲೇ ಆರಂಭವಾಗಲಿದ್ದು, ಪ್ರಮುಖ ‘ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಸಭೆ’ಯು ಜುಲೈ 10, 11 ಮತ್ತು 12ರಂದು (ಯುಗಾಬ್ದ 5128, ವಿಕ್ರಮ ಸಂವತ್ 2083ರ ಆಷಾಢ ಕೃಷ್ಣ ದಶಮಿಯಿಂದ ತ್ರಯೋದಶಿಯವರೆಗೆ) ಜರುಗಲಿದೆ.
ಈ ಉನ್ನತ ಮಟ್ಟದ ಸಭೆಯಲ್ಲಿ ದೇಶಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪ್ರಾಂತ ಪ್ರಚಾರಕರು, ಸಹ-ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು ಹಾಗೂ ಸಹ-ಕ್ಷೇತ್ರ ಪ್ರಚಾರಕರು ಪಾಲ್ಗೊಳ್ಳಲಿದ್ದಾರೆ. ಸಂಘಟನಾ ವ್ಯವಸ್ಥೆಯ ಅನ್ವಯ ದೇಶದ ಒಟ್ಟು 11 ಕ್ಷೇತ್ರಗಳು ಹಾಗೂ 46 ಪ್ರಾಂತಗಳಿಂದ ಪ್ರಮುಖ ಕಾರ್ಯಕರ್ತರು ಬೆಳಗಾವಿಗೆ ಆಗಮಿಸಲಿದ್ದಾರೆ. ಇದರೊಂದಿಗೆ, ಸಂಘಪ್ರೇರಿತ 32 ವಿವಿಧ ಸಂಘಟನೆಗಳ ಅಖಿಲ ಭಾರತೀಯ ಸಂಘಟನಾ ಮಂತ್ರಿಗಳು ಕೂಡ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.
ಡಾ. ಮೋಹನ್ ಭಾಗವತ್ ಸರಸಂಘಚಾಲಕರು, ದತ್ತಾತ್ರೇಯ ಹೊಸಬಾಳೆ ಸರಕಾರ್ಯವಾಹರು, ಡಾ. ಕೃಷ್ಣಗೋಪಾಲ್, ಸಿ. ಆರ್. ಮುಕುಂದ, ಅರುಣ್ ಕುಮಾರ್, ರಾಮದತ್ತ, ಆಲೋಕ್ ಕುಮಾರ್ ಹಾಗೂ ಅತುಲ್ ಲಿಮಯೆ, * ಅಖಿಲ ಭಾರತೀಯ ಕಾರ್ಯ ವಿಭಾಗದ ಪ್ರಮುಖರು ಮತ್ತು ಕಾರ್ಯಕಾರಿ ಮಂಡಳಿಯ ಸದಸ್ಯರು ಉಪಸ್ಥಿತರಿರಲಿದ್ದಾರೆ.
ಕಳೆದ ಮಾರ್ಚ್ ತಿಂಗಳಲ್ಲಿ ಹರಿಯಾಣದ ಸಮಾಲ್ಖಾದಲ್ಲಿ ನಡೆದ ‘ಅಖಿಲ ಭಾರತೀಯ ಪ್ರತಿನಿಧಿ ಸಭೆ’ಯ ನಂತರ, ಏಪ್ರಿಲ್‌ನಿಂದ ಜೂನ್‌ವರೆಗೆ ದೇಶದಾದ್ಯಂತ ವಿವಿಧ ಹಂತಗಳ ಸಂಘ ಶಿಕ್ಷಣ ವರ್ಗಗಳು ಯಶಸ್ವಿಯಾಗಿ ಮುಕ್ತಾಯಗೊಂಡಿವೆ. ಅದರ ಮುಂದುವರಿದ ಭಾಗವಾಗಿ ಬೆಳಗಾವಿ ಸಭೆಯಲ್ಲಿ ಈ ಕೆಳಗಿನ ಪ್ರಮುಖ ವಿಷಯಗಳ ಕುರಿತು ಗಂಭೀರ ಚರ್ಚೆ ನಡೆಯಲಿದೆ:



