Monday, July 13, 2026
Google search engine
Homeರಾಜ್ಯರಾಜ್ಯದಲ್ಲಿ ಮುಂಗಾರು ಅಬ್ಬರ: ಕೊಡುಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂಗಾರು ಅಬ್ಬರ: ಕೊಡುಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂಗಾರು ಅಬ್ಬರ ಇನ್ನಷ್ಟು ದಿನಗಳ ಕಾಲ ಮುಂದುವರಿಯಲಿದ್ದು, ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜುಲೈ 24ರವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮುಂತಾದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮಂಗಳೂರು ತಾಲೂಕಿನಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಮಂಗಳೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದ್ದು, ಮೀನುಗಾರರು ಸಮುದ್ರ ಹಾಗೂ ನದಿಗಳಿಗೆ ಇಳಿಯದಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೆಲ ತಾಲೂಕಿನಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿ 40-50ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹಿನ್ನಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments