ರಾಯಚೂರು ನಗರ ಸೇರಿ ಜಿಲ್ಲೆಯಾದ್ಯಂತ ನಡೆಸಲಾಗುತ್ತಿದ್ದ 120ಕ್ಕೂ ಹೆಚ್ಚು ನಕಲಿ ವೈದ್ಯರ ಕ್ಲಿನಿಕ್ ಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬಂದ್ ಮಾಡಲಾಗಿದೆ.
ಕೆಪಿಎಂಇ ರಿಜಿಸ್ಟ್ರೇಷನ್ ಇಲ್ಲದೆ ಅಲೋಪತಿ ಚಿಕಿತ್ಸೆ ನೀಡುತ್ತಿರುವ ಆಯುಷ್ ವೈದ್ಯರು ಸೇರಿದಂತೆ ನಕಲಿ ವೈದ್ಯರು ನಡೆಸುತ್ತಿದ್ದ ಕ್ಲಿನಿಕ್ ಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದ್ದು, ಅಂತಹ 120ಕ್ಕೂ ಹೆಚ್ಚು ಕ್ಲಿನಿಕ್ ಗಳನ್ನು ಮುಚ್ಚಲಾಗಿದೆ. ಅಲ್ಲದೇ ನಿಯಮ ಉಲ್ಲಂಘಿಸಿದ್ದ 17 ಜನರಿಗೆ 25 ರಿಂದ 50 ಸಾವಿರ ರೂ. ದಂಡ ವಿಧಿಸಲಾಗಿದೆ. ನಕಲಿ ವೈದ್ಯರಿಗೆ ಕಾನೂನು ಕ್ರಮ ಜರುಗಿಸುವುದಾಗಿ ಆರೋಗ್ಯ ಇಲಾಖೆ ಡಿಎಚ್ಒ ಡಾ.ಸುರೇಂದ್ರಬಾಬು ಹೇಳಿದ್ದಾರೆ.
ಕೆಡಿಪಿ ಸಭೆಯಲ್ಲಿ ನಕಲಿ ವೈದ್ಯರ ವಿರುದ್ಧ ಆಕ್ರೋಶ
ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಆರ್ಎಂಪಿ ವೈದ್ಯರ ವಿರುದ್ಧ ಎಂಎಲ್ಸಿ ಶರಣಗೌಡ ಬಯ್ಯಾಪುರ ಆಕ್ರೋಶ ವ್ಯಕ್ತಪಡಿಸಿ ಜಿಲ್ಲೆಯಲ್ಲಿ ವ್ಯಾಪಕವಾಗಿರುವ ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದರು.
ಚಿಕಿತ್ಸೆ ಆರಂಭದಲ್ಲೇ ಆರ್ಎಂಪಿ ನಕಲಿ ವೈದ್ಯರು ಹೈಡೋಸ್ ಚಿಕಿತ್ಸೆ ಕೊಡುತ್ತಾರೆ. ಹೀಗಾಗಿ ನಕಲಿ ವೈದ್ಯರ ಬಳಿ ಬರುವವರು ಅತೀ ಕಡಿಮೆ ಅವಧಿಯಲ್ಲೇ ಗುಣ ಮುಖರಾಗುತ್ತಾರೆ. ಆದರೆ ಅವರ ದೀರ್ಘಕಾಲದ ಸ್ಥಿತಿಗತಿಯನ್ನ ಆರ್ಎಂಪಿ ವೈದ್ಯರು ತಲೆಕಡೆಸಿಕೊಳ್ಳಲ್ಲ. ಅಸಲಿ ವೈದ್ಯರು ಹಂತಹಂತವಾಗಿ ಚಿಕಿತ್ಸೆ ನೀಡುತ್ತಾರೆ. ಹೀಗಾಗಿ ಜನರು ಹೈಡೋಸ್ ಕೊಡುವ ನಕಲಿ ವೈದ್ಯರ ಬಳಿಯೇ ಹೋಗುತ್ತಾರೆ ಅಂತ ಎಂಎಲ್ಸಿ ಶರಣೇಗೌಡ ಬಯ್ಯಾಪುರ ಕಿಡಿಕಾರಿದ್ದರು.
ಜಿಲ್ಲೆಯಾದ್ಯಂತ ಈ ವಿಷಯ ಭಾರೀ ಸದ್ದು ಮಾಡಿತ್ತು. ಬಳಿಕ ಜಿಲ್ಲೆಯಲ್ಲಿ ಕಾರ್ಯಚರಿಸುತ್ತಿರುವ ನಕಲಿ ವೈದ್ಯರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೀಶ್.ಕೆ ಆದೇಶದನ್ವಯ ಆರೋಗ್ಯ ಇಲಾಖೆ ಜಿಲ್ಲೆಯಲ್ಲಿ ನಕಲಿ ವೈದ್ಯರ ವಿರುದ್ಧ ಕಾರ್ಯಾಚರಣೆ ನಡೆಸಿತ್ತು.
ಅಸಲಿ ವೈದ್ಯರು ಹಂತ ಹಂತವಾಗಿ ಚಿಕಿತ್ಸೆ ನೀಡುತ್ತಾರೆ. ಹೀಗಾಗಿ ಜನರು ಹೈಡೋಸ್ ಕೊಡುವ ನಕಲಿ ವೈದ್ಯರ ಬಳಿಯೇ ಹೋಗುತ್ತಾರೆ ಎಂದು ಎಂಎಲ್ಸಿ ಶರಣೇಗೌಡ ಬಯ್ಯಾಪುರ ಆತಂಕ ವ್ಯಕ್ತಪಡಿಸಿದ್ದರು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಕಲಿ ವೈದ್ಯರ ವೀಡಿಯೊಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದೇ ಕಾರಣಕ್ಕೆ ಜಿಲ್ಲಾಧಿಕಾರಿ ನಿತೀಶ್.ಕೆ ಅವರ ಆದೇಶದನ್ವಯ ಆರೋಗ್ಯ ಇಲಾಖೆ ಜಿಲ್ಲೆಯಲ್ಲಿ ನಕಲಿ ವೈದ್ಯರ ವಿರುದ್ಧ ಬಿಗ್ ಆಪರೇಶನ್ ಮಾಡಿದೆ.



