Sunday, June 14, 2026
Google search engine
Homeಬೆಂಗಳೂರುಅಮ್ಮ ಕ್ಷಮಿಸಿ ಬಿಡು: ಡೆತ್ ನೋಟ್ ಬರೆದಿಟ್ಟು ಕಲಾವಿದ ದಂಪತಿಯ 13 ವರ್ಷದ ಬಾಲಕ ಆತ್ಮಹತ್ಯೆ

ಅಮ್ಮ ಕ್ಷಮಿಸಿ ಬಿಡು: ಡೆತ್ ನೋಟ್ ಬರೆದಿಟ್ಟು ಕಲಾವಿದ ದಂಪತಿಯ 13 ವರ್ಷದ ಬಾಲಕ ಆತ್ಮಹತ್ಯೆ

ಅಮ್ಮಾ.. ನನ್ನನ್ನು ಕ್ಷಮಿಸಿ ಎಂದು ಡೆತ್‌ ನೋಟ್‌ ಬರೆದಿಟ್ಟು ಆರ್ಕೆಸ್ಟ್ರಾ ಕಲಾವಿದ ದಂಪತಿಯ 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡೆ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಲಾವಿದೆ ಸವಿತಾ ಹಾಗೂ ಆರ್ಕೆಸ್ಟ್ರಾ ಕಲಾವಿದ ಗಣೇಶ್ ಪ್ರಸಾದ್ ಅವರ ಪುತ್ರ ಗಾಂಧರ್ (13) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಾಯಿ ಸವಿತಾ ಆಸ್ಟ್ರೇಲಿಯಾದಲ್ಲಿ ಕಾರ್ಯಕ್ರಮಕ್ಕೆ ತೆರಳಿದ ವೇಳೆ ಈ ಘಟನೆ ನಡೆದಿದ್ದು, ತಂದೆ ಬೆಳಿಗ್ಗೆ ರೂಮ್ ಬಾಗಿಲು ತೆರೆದಾಗ ಮಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಸವಿತಾ ಜನಪದ ಕಲಾವಿದೆ ಆಗಿದ್ದು, ಗಾಂಧರ್ ಎರಡನೇ ಪುತ್ರನಾಗಿದ್ದಾನೆ. ಗಾಂಧರ್ ಪ್ರಾರ್ಥನಾ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿ ಆಗಿದ್ದ.

ಗಾಂಧರ್ ಡೆತ್ ನೋಟ್ ನಲ್ಲಿ ಏನಿದೆ?

ಈ ಮನೆ ಚೆನ್ನಾಗಿರಬೇಕೆಂದು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ಮೇಲೆ ನಿಮಗೆ ಕೋಪ ಬರುವಂತೆ ನಡೆದುಕೊಂಡಿದ್ದೇನೆ. ನನ್ನಿಂದ ನೊಂದಿದ್ದೀರಾ, ನಿಮಗೆ ತೊಂದರೆ ಕೂಡ ನೀಡಿದ್ದೇನೆ, ಆದರೆ ನನ್ನ ಉದ್ದೇಶ ನಿಮ್ಮನ್ನು ನೋಯಿಸೋದಾಗಿರಲಿಲ್ಲ. ನನ್ನ ಮೇಲೆ ನಿಮಗೆ ಕೋಪ ಇದ್ದರೆ ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ನನ್ನ ತಪ್ಪುಗಳನ್ನು ದಯವಿಟ್ಟು ಕ್ಷಮಿಸಿ. 14 ವರ್ಷ ನಾನು ಬದುಕಿದ್ದು ಅದರಲ್ಲೇ ತೃಪ್ತನಾಗಿದ್ದೇನೆ. ಖುಷಿಯ ಕ್ಷಣ ಕಳೆದಿದ್ದೇನೆ ಅದೇ ಸಾಕು. ಸ್ವರ್ಗದಲ್ಲಿ ನಾನು ಖುಷಿಯಾಗಿದ್ದೇನೆ. ನಾನು ನನ್ನ ಸ್ನೇಹಿತರನ್ನು ಪ್ರೀತಿಸುತ್ತಿದ್ದೆ ಎಂದು ಅವರಿಗೆ ತಿಳಿಸಿ. ನನ್ನ ಶಾಲಾ ಸ್ನೇಹಿತರಿಗೂ ಈ ಮಾತು ಹೇಳಿ. ಐ ಮಿಸ್ ಯೂ ಆಲ್- ಗುಡ್​ಬೈ ಅಮ್ಮ ಎಂದು ಡೆತ್​ನೋಟ್​ ಬರೆಯಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments