ಎರಡು ಮಕ್ಕಳ ತಾಯಿಯನ್ನು ಕೊಂದ ನಂತರ ಮೂರು ಮಕ್ಕಳ ತಂದೆಯಾದ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ಚೇಳೂರು ತಾಲೂಕಿನ ಗರಿಗಿರೆಡ್ಡಿ ಪಾಳ್ಯದಲ್ಲಿ ಸಲ್ಮಾ ಎಂಬಾಕೆಯನ್ನು ಬಾಬಾಜಾನ್ ಚಾಕುವಿನಿಂದ ಕತ್ತು ಕೊಯ್ದು ಕೊಂದು ನಂತತ ತನ್ನ ಮನೆಗೆ ಬಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಲ್ಮಾಗೆ ಗಂಡ ಮತ್ತು ಗಂಡ ಇಬ್ಬರು ಮಕ್ಕಳಿದ್ದು, ಕಳೆದ ಆರು ವರ್ಷಗಳಿಂದ ಬಾಬಾಜಾನ್ ಜೊತೆ ಸಂಬಂಧದಲ್ಲಿದ್ದಳು. ಬಾಬಾಜಾನ್‌ಗೂ ಮದುವೆಯಾಗಿ ಮೂವರು ಮಕ್ಕಳಿದ್ದು, ಹೆಂಡತಿ ಮಕ್ಕಳು ಬಿಟ್ಟು ಹೋಗಿದ್ದಾರೆ.
ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಇದಲ್ಲದೆ ಬೇರೆ ಕಾರಣ ಇರಬಹುದೇ ಎಂಬ ನಿಟ್ಟಿನಲ್ಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.



