ನೋಬೆಲ್ ಪ್ರಶಸ್ತಿ ಪುರಸ್ಕೃತ ಹಾಗೂ ಬಡವರ ಬ್ಯಾಂಕರ್ ಎಂದೇ ಖ್ಯಾತರಾದ ಮುಹಮ್ಮದ್ ಯುನುಸ್ ಬಾಂಗ್ಲಾದೇಶ ಮಧ್ಯಂತರ ಸರ್ಕಾರ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಗುರುವಾರ ರಾತ್ರಿ ಬಾಂಗ್ಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನರ ಆಶೋತ್ತರಗಳನ್ನು ಈಡೇರಿಸುವ ಹಾಗೂ ಅವರ ಭದ್ರತೆ ಕಲ್ಪಿಸುವ ಮೂಲಕ ಸಂವಿಧಾನ ಎತ್ತಿ ಹಿಡಿಯುವೆ ಎಂದು ಯೂನುಸ್ ಪ್ರಮಾಣ ವಚನ ಸ್ವೀಕರಿಸಿದರು.
ಯೂನುಸ್ ನೇತೃತ್ವದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮಾಜಿ ಪ್ರಧಾನಿ ಶೇಖ್ ಹಸಿನಾ ಅವರ 15 ವರ್ಷಗಳ ಯುಗ ಅಧಿಕೃತವಾಗಿ ಅಂತ್ಯಗೊಂಡಿತು.
ಬಾಂಗ್ಲಾದೇಶ ಅಧ್ಯಕ್ಷ ಮೊಹಮದ್ದೀನ್ ಶಹಬುದ್ದೀನ್ ಪ್ರಮಾಣ ವಚನ ಬೋಧಿಸಿದರು. ಪ್ಯಾರಿಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೊಹಮದ್ ಯೂನುಸ್ ದಿಢೀರ್ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಬಾಂಗ್ಲಾಗೆ ಆಗಮಿಸಿದ ಕೆಲವೇ ದಿನಗಳಲ್ಲಿ ಸರ್ಕಾರದ ನೇತೃತ್ವ ವಹಿಸಿದರು.