ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯಮ ವೇಗಿ ಭುವನೇಶ್ವರ್ ಕುಮಾರ್ ಮಾರಕ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್ 166 ರನ್ ಗಳ ಸಾಧಾರಣ ಮೊತ್ತ ಕಲೆಹಾಕಿದೆ.
ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 166 ರನ್ ಗಳ ಸಾಧಾರಣ ಮೊತ್ತ ಕಲೆಹಾಕಿತು.
ಭುವನೇಶ್ವರ್ ದಾಳಿಗೆ ತತ್ತರಿಸಿದ ಮುಂಬೈ 28 ರನ್ ಕಲೆಹಾಕುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಯಿತು. ಆದರೆ ನಮನ್ ಧೀರ್ ಮತ್ತು ತಿಲಕ್ ವರ್ಮಾ 4ನೇ ವಿಕೆಟ್ ಗೆ 78 ರನ್ ಜೊತೆಯಾಟವಾಡಿ ತಂಡವನ್ನು ಆಧರಿಸಿದರು.
ನಮನ್ ಧೀರ್ 32 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 47 ರನ್ ಬಾರಿಸಿ ಔಟಾದರೆ, ತಿಲಕ್ ವರ್ಮಾ 42 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 57 ರನ್ ಬಾರಿಸಿ ಅರ್ಧಶತಕದ ಗೌರವಕ್ಕೆ ಪಾತ್ರರಾದರು.
ಭುವನೇಶ್ವರ್ 4 ವಿಕೆಟ್ ಪಡೆದು ಮಿಂಚಿದರೆ, ಹಾಜೆಲ್ ವುಡ್, ರಸಿಕ್ ಖಾನ್ ಮತ್ತು ರೊಮಾರಿಯೊ ಶೆಫರ್ಡ್ ತಲಾ 1 ವಿಕೆಟ್ ಗಳಿಸಿದರು.



