Friday, November 22, 2024
Google search engine
Homeಜಿಲ್ಲಾ ಸುದ್ದಿಮೈಸೂರು: ಡೆಂಘೇ ಕಾಯಿಲೆಗೆ ವೈದ್ಯಾಧಿಕಾರಿಯೇ ಬಲಿ!

ಮೈಸೂರು: ಡೆಂಘೇ ಕಾಯಿಲೆಗೆ ವೈದ್ಯಾಧಿಕಾರಿಯೇ ಬಲಿ!

ರಾಜ್ಯದಲ್ಲಿ ಡೆಂಘೇ ಜ್ವರದ ಅಬ್ಬರ ಹೆಚ್ಚಾಗುತ್ತಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಕಾಯಿಲೆಗೆ ವೈದ್ಯಾಧಿಕಾರಿಯೇ ಬಲಿಯಾಗಿದ್ದಾರೆ.

ಹೂಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೈಸೂರಿನ ಆರೋಗ್ಯಾಧಿಕಾರಿ ನಾಗೇಂದ್ರ (32) ನಿಧನರಾಗಿದ್ದಾರೆ.

ಮೈಸೂರಿನಲ್ಲಿ ಪ್ರಸ್ತುತ 162 ಡೆಂಘೇ ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ ಕಾಯಿಲೆಗೆ ಆದ ಮೊದಲ ಬಲಿ ಆಗಿದೆ.

ನೆರೆಯ ಹಾಸನ ಜಿಲ್ಲೆಯಲ್ಲಿ ಮಕ್ಕಳಲ್ಲಿ ಹೆಚ್ಚಾಗಿ ಡೆಂಘೇ ಕಾಯಿಲೆ ಕಾಣಿಸಿಕೊಳ್ಳುತ್ತಿದ್ದು, ಒಂದೇ ವಾರದಲ್ಲಿ ಮೂವರು ಬಾಲಕಿಯರು ಮೃತಪಟ್ಟಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಲ್ಲೂ ಮಕ್ಕಳ ಸಂಖ್ಯೆಯೇ ಹೆಚ್ಚಿದೆ. ಹಿಮ್ಸ್ ನಲ್ಲಿ 48 ಮಕ್ಕಳು ಹಾಗೂ 22 ವಯಸ್ಕರು ಚಿಕಿತ್ಸೆಗೆ ದಾಖಲಾಗಿದ್ದಾರೆ. 48 ಮಕ್ಕಳ ಪೈಕಿ 11 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜನವರಿಯಿಂದ ಈವರೆಗೆ ಡೆಂಗ್ಯೂ ಶಂಕಿತ 628 ವಯಸ್ಕರು ಹಾಗೂ 602 ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಳರೋಗಿಯಾಗಿ ದಾಖಲಿಸಿ ಹಿಮ್ಸ್ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ ಡೆಂಗ್ಯೂ ಪೀಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೆ ಇದೆ. ಈವರೆಗೆ ಒಟ್ಟು ನಾಲ್ವರು ಮಹಾಮಾರಿ ಡೆಂಗ್ಯೂಗೆ ಬಲಿಯಾಗಿದ್ದಾರೆ. ಅದರಲ್ಲಿ ಎರಡು ಸಾವುಗಳನ್ನು ರಾಜ್ಯ ಡೆಂಗ್ಯೂ ಡೆತ್ ಆಡಿಟ್ ಸಮಿತಿ ದೃಢಪಡಿಸಿದೆ.

ಇದುವರೆಗೆ ಜಿಲ್ಲೆಯಲ್ಲಿ 6400 ಜನರಿಗೆ ಡೆಂಗ್ಯೂ ಪರೀಕ್ಷೆ ನಡೆಸಲಾಗಿದೆ. ಡೆಂಗ್ಯೂ ನಿಯಂತ್ರಕ್ಕೆ ಹಲವು ಕ್ರಮ ಕೈಗೊಂಡ ಬಗ್ಗೆ ಹಿಮ್ಸ್ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments