Monday, August 17, 2026
Google search engine
Homeರಾಜ್ಯವಿಧಾನಸಭೆಯಲ್ಲಿ ನಾಗೇಂದ್ರ ರಾಜೀನಾಮೆಗೆ ವಿಪಕ್ಷ ಪಟ್ಟು; ಕೋಲಾಹಲ

ವಿಧಾನಸಭೆಯಲ್ಲಿ ನಾಗೇಂದ್ರ ರಾಜೀನಾಮೆಗೆ ವಿಪಕ್ಷ ಪಟ್ಟು; ಕೋಲಾಹಲ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ  ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ಜೆಡಿಎಸ್ ಸದಸ್ಯರು ಪಟ್ಟು ಹಿಡಿದು ಪ್ರತಿಭಟನೆ ನಡೆಸಿ ಘೋಷಣೆ ಕೂಗಿದ್ದರಿಂದ ಆಡಳಿತ ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ಗದ್ದಲ ಕೋಹಾಹಲ ಉಂಟಾಗಿ ಉಭಯ ಸದನಗಳ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಆಶೋಕ್ ನೇತೃತ್ವದಲ್ಲಿ ಬಿಜೆಪಿ ಜೆಡಿಎಸ್ ಶಾಸಕರು ಸಚಿವ ಬಿ. ನಾಗೇಂದ್ರ  ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗ ತೊಡಗಿದರು.

ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಬಿಜೆಪಿ ನಾಯಕರು ನಾಗೇಂದ್ರರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಗಳ ಅಕ್ರಮದಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆ ಎದುರಿಸುತ್ತಿರುವ ನಾಗೇಂದ್ರ ರಾಜೀನಾಮೆ ನೀಡುವವರೆಗೆ ಸದನ ನಡೆಸಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ಪ್ರತಿಪಕ್ಷಗಳ ಸದಸ್ಯರ ಘೋಷಣೆ ಗದ್ದಲ ನಡುವೆ ಸಭಾಧ್ಯಕ್ಷ ಜಿ ಎಸ್ ಪಾಟೀಲ್ ಅವರು ಪ್ರಶ್ನೋತ್ತರ ಸೇರಿ ಉಳಿದ ನಡೆಸಿ ಕಲಾಪವನ್ನು ಕೈಗೊಂಡು ಬಳಿಕ ಸದನವನ್ನು ಮಂಗಳವಾರಕ್ಕೆ ಮುಂದೂಡಲಾಯಿತು.
ಇತ್ತ ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ ಹಾಗೂ ಆಡಳಿತ ಪಕ್ಷದ ನಾಯಕರ ಪ್ರತಿಕ್ರಿಯೆಯಿಂದ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.

ಪ್ರಶ್ನೋತ್ತರ ಕಲಾಪ ಆರಂಭದಲ್ಲೇ ಬಿಜೆಪಿ ಸದಸ್ಯರು ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಸಚಿವರ ರಾಜೀನಾಮೆ ಪಡೆಯುವವರೆಗೂ ಕಲಾಪ ಮುಂದುವರಿಸಬಾರದು ಎಂದು ಒತ್ತಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನ ರಾಯರೆಡ್ಡಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ‘ಮೊದಲು ರಾಜೀನಾಮೆ, ನಂತರ ಕಲಾಪ’ ಎಂದು ಘೋಷಣೆ ಕೂಗಿದರು. ಇದರಿಂದ ಸದನದಲ್ಲಿ ಕೆಲಕಾಲ ಗದ್ದಲ ಉಂಟಾಯಿತು. ಬಿಜೆಪಿ ನಾಯಕರ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಸಚಿವ ಯು.ಟಿ. ಖಾದರ್, ಪ್ರಕರಣದಲ್ಲಿ ಈಗಾಗಲೇ ನ್ಯಾಯಾಲಯದ ತೀರ್ಪು ಬಂದಿರುವುದನ್ನು ಉಲ್ಲೇಖಿಸಿ, ನ್ಯಾಯಾಲಯಕ್ಕಿಂತ ತಾವು ದೊಡ್ಡವರೇ? ಎಂಬ ರೀತಿಯಲ್ಲಿ ಪ್ರತಿಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

ನಾಗೇಂದ್ರ ವಿರುದ್ಧ ತನಿಖೆ ನಡೆದು, ಆರೋಪ ಪಟ್ಟಿಯೂ ಸಲ್ಲಿಕೆಯಾಗಿದೆ. ಹೀಗಿದ್ದೂ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದು ಏಕೆ? ಸರ್ಕಾರದ ಮೇಲೆ ಅಂತಹ ಒತ್ತಡ ಏನಿತ್ತು. ಈ ವಿಚಾರದಲ್ಲಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು. ಇದಕ್ಕೆ ಸಭಾ ನಾಯಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಸರ್ಕಾರ ಈ ಬಗ್ಗೆ ಚರ್ಚೆಗೆ ಬರಲಿದೆ ಎಂದರು.

ಇದನ್ನು ಒಪ್ಪದ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿ ಘೋಷಣೆ ಕೂಗಿದ್ದರಿಂದ ಗದ್ದಲ ಉಂಟಾಗಿ  ಸದನವನ್ನು ಮಂಗಳವಾರಕ್ಕೆ ಮುಂದೂಡಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments