Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಬೆಂಗಳೂರು

ಶೌಚಾಲಯ ಬಳಕೆಗೂ ಶುಲ್ಕ ಹೇರಿದ ನಮ್ಮ ಮೆಟ್ರೋ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 2 ವೀಕ್ಷಣೆಗಳು
namma metro toilet

ಕೆಲವು ತಿಂಗಳ ಹಿಂದೆಯಷ್ಟೇ ಭಾರೀ ಪ್ರಮಾಣದಲ್ಲಿ ಪ್ರಯಾಣ ಟಿಕೆಟ್ ದರ ಏರಿಕೆ ಮಾಡಿ ತೀವ್ರ ಟೀಕೆಗೆ ಗುರಿಯಾಗಿದ್ದ ನಮ್ಮ ಮೆಟ್ರೋ ಇದೀಗ ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದೆ.

ಬಿಎಂಆರ್‌ಸಿಎಲ್‌ ನಮ್ಮ ಮೆಟ್ರೋ ವ್ಯಾಪ್ತಿಯ 12 ಶೌಚಾಲಯಗಳ ಬಳಕೆಗೆ ಶುಲ್ಕ ನಿಗದಿ ಮಾಡಿದೆ. ಇದರಿಂದ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿರುವ ಶೌಚಾಲಯಗಳ ಬಳಕೆಗೆ ಮೆಟ್ರೊ ಪ್ರಯಾಣಿಕರು ಇನ್ನು ಮುಂದೆ ಹಣ ಪಾವತಿಸಬೇಕಿದೆ.

ಬಿಎಂಆರ್‌ಸಿಎಲ್‌ ಖಾಸಗಿ ಸಂಸ್ಥೆಯ ಜೊತೆಗೆ ನಿರ್ವಹಣೆ ಒಪ್ಪಂದ ಮಾಡಿಕೊಂಡಿದ್ದು, ನಗರದ 12 ನಿಲ್ದಾಣಗಳಲ್ಲಿನ ಶೌಚಾಲಯಗಳಲ್ಲಿ ಮೂತ್ರ ವಿಸರ್ಜನೆಗೆ 2 ರೂ., ಮಲ ವಿಸರ್ಜನೆಗೆ 5 ರೂ. ದರ ನಿಗದಿ ಮಾಡಿದೆ. ಮೆಟ್ರೋದ ಈ ನಿರ್ಧಾರಕ್ಕೆ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನಗರದ ನ್ಯಾಷನಲ್‌ ಕಾಲೇಜು, ಲಾಲ್‌ಬಾಗ್, ಸೌಥ್‌ ಆ್ಯಂಡ್‌ ಸರ್ಕಲ್‌, ಜಯನಗರ, ರಾಷ್ಟ್ರೀಯ ವಿದ್ಯಾಲಯ ರಸ್ತೆ, ಬನಶಂಕರಿ, ಜಯಪ್ರಕಾಶ ನಗರ, ಯೆಲಚೇನಹಳ್ಳಿ, ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣ ಸೆಂಟ್ರಲ್‌ ಕಾಲೇಜು, ಡಾ.ಅಂಬೇಡ್ಕರ್‌ ನಿಲ್ದಾಣ, ವಿಧಾನಸೌಧ, ಕಬ್ಬನ್‌ ಪಾರ್ಕ್‌ ಮತ್ತು ಮೆಜೆಸ್ಟಿಕ್‌ ನಿಲ್ದಾಣಗಳಲ್ಲಿನ ಶೌಚಾಲಯಗಳನ್ನು ಇನ್ನು ಮುಂದೆ ಹಣ ಪಾವತಿಸಿ ಬಳಸಬೇಕಾಗುತ್ತದೆ.

ಶೌಚಾಲಯಕ್ಕೆ ದರ ವಿಧಿಸಿದ್ದಕ್ಕೆ ಸಾರ್ವಜನಿಕರಿಂದ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದನ್ನು ಬಿಟ್ಟು ಶೌಚಾಲಯ ಬಳಕೆ ಮಾಡಿದ್ದಕ್ಕೆ ಜನರಿಂದ ದುಡ್ಡು ಸಂಗ್ರಹಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಮೆಟ್ರೋ ನಿಲ್ದಾಣಗಳಲ್ಲಿರುವ ಶೌಚಾಲಯಗಳು ಮೆಟ್ರೋ ಟಿಕೆಟ್‌ ಇಲ್ಲದೆ ಪ್ರವೇಶಿಸಬಹುದಾದ ಸ್ಥಳದಲ್ಲಿವೆ. ಹೀಗಾಗಿ ಈ ಶೌಚಾಲಯಗಳನ್ನು ಮೆಟ್ರೋ ಪ್ರಯಾಣಿಕರು ಅಲ್ಲದೆ ಬೇರೆಯವರು ಬಳಸುತ್ತಿದ್ದಾರೆ. ಹೀಗಾಗಿ ಅದರ ನಿರ್ವಹಣೆಯನ್ನು ಸುಲಭ್‌ ಇಂಟರ್‌ನ್ಯಾಷನಲ್‌ ಸಂಸ್ಥೆಗೆ ವಹಿಸಿದ್ದೇವೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment