Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ನಾಳೆ 1000 ವಿಮಾನ ರದ್ದು: ಪ್ರಯಾಣಿಕರಿಗೆ ಪೂರ್ಣ ಮರುಪಾವತಿ, ವಸತಿ, ಊಟ: ಇಂಡಿಗೊ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 22 ವೀಕ್ಷಣೆಗಳು
indigo passengers

ನವದೆಹಲಿ: ವಿಮಾನ ಹಾರಾಟ ವ್ಯತ್ಯಯದಿಂದ ದೇಶಾದ್ಯಂತ ಸಿಲುಕಿರುವ ಸಾವಿರಾರು ಪ್ರಯಾಣಿಕರಿಗೆ ಪರಿಹಾರವಾಗಿ ಟಿಕೆಟ್ ದರ ಪೂರ್ಣ ಮರುಪಾವತಿ, ವಸತಿ ಹಾಗೂ ಭೋಜನ ವ್ಯವಸ್ಥೆಯನ್ನು ಇಂಡಿಗೋ ವಿಮಾನ ಸಂಸ್ಥೆ ಘೋಷಿಸಿದೆ.

ಡಿಸೆಂಬರ್ 5ರಿಂದ 15ರವರೆಗೆ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ನಿರ್ಗಮನಗಳನ್ನ ರಾತ್ರಿ 11:59ರವರೆಗೆ ರದ್ದುಗೊಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ದೃಢಪಡಿಸಿದೆ.

ಇದೇ ವೇಳೆ ಇಂಡಿಯೊ ಸಿಇಒ ಪೀಟರ್ ಎಲ್ಬರ್ಟ್ಸ್ ನಾಳೆ ಅಂದರೆ ಡಿಸೆಂಬರ್ 6ರಂದು 1000 ವಿಮಾನಗಳ ಹಾರಾಟ ರದ್ದುಗೊಳ್ಳಲಿದೆ. ಡಿಸೆಂಬರ್ 10ರಿಂದ 15ರ ವೇಳೆ ಸಹಜ ಸ್ಥಿತಿಗೆ ಬರಲಿದ್ದು, ಅಲ್ಲಿಯವರೆಗೆ  ಪ್ರಯಾಣಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ವಿಮಾನಯಾನ ರದ್ದುಗೊಳಿಸಿದ್ದರಿಂದ ಪ್ರಯಾಣಿಕರಿಗೆ ಆಗಿರುವ ಅನಾನುಕೂಲದ ಬಗ್ಗೆ ಪ್ರಯಾಣಿಕರ ಬಳಿ “ಗಂಭೀರ ಕ್ಷಮೆಯಾಚಿಸಿದೆ” ಎಂದು ಪ್ರಕಟಣೆಯಲ್ಲಿ ಘೋಷಿಸಿರುವ ಇಂಡಿಗೋ ಸಂಸ್ಥೆ ಪ್ರಯಾಣಿಕರ ಸೇವೆಯೇ ನಮಗೆ ಮೊದಲ ಆದ್ಯತೆ ಎಂದು ಹೇಳಿದೆ.

ಕೇಂದ್ರ ಸರ್ಕಾರ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುವ ಪೈಲೆಟ್ ಗಳು ಹಾಗೂ ಪೈಲೆಟ್ ಗಳ ವಾರದ ರಜೆ ಕುರಿತು ಜಾರಿಗೆ ತಂದ ನಿಯಮದಿಂದ ಪೈಲೆಟ್ ಗಳು ತಮ್ಮ ಸೌಲಭ್ಯಗಳನ್ನು ಬಳಸಿದ್ದರಿಂದ ಪೈಲೆಟ್ ಗಳ ಕೊರತೆ ಎದುರಿಸಿದ ಇಂಡಿಗೋ ಸಂಸ್ಥೆಯ ವಿಮಾನಗಳ ಹಾರಾಟ ಏಕಾಏಕಿ ಸ್ಥಗಿತಗೊಂಡಿವೆ.

ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸಾವಿರಾರು ಪ್ರಯಾಣಿಕರನ್ನು ಸಿಲುಕಿಸಿರುವ `ಗಂಭೀರ ಕಾರ್ಯಾಚರಣೆಯ ಬಿಕ್ಕಟ್ಟು’  ಒಪ್ಪಿಕೊಂಡು ವಿಮಾನಯಾನ ಸಂಸ್ಥೆಯು ವಿವರವಾದ ಸಾರ್ವಜನಿಕ ಕ್ಷಮೆಯಾಚಿಸಿದೆ.

ಕಳೆದ ಕೆಲವು ದಿನಗಳ ಆಡಚಣೆಗೆ ನಾವು ಕ್ಷಮೆಯಾಚಿಸುತ್ತೇವೆ ಮತ್ತು ಅರ್ಥಮಾಡಿಕೊಂಡಿದ್ದೇವೆ. ಇದು ರಾತ್ರೋರಾತ್ರಿ ಬಗೆಹರಿಯುವುದಿಲ್ಲವಾದರೂ, ನಮ್ಮ ಕಾರ್ಯಾಚರಣೆಗಳನ್ನು ಆದಷ್ಟು ಬೇಗ ಸಾಮಾನ್ಯ ಸ್ಥಿತಿಗೆ ತರಲು ಎಲ್ಲವನ್ನೂ ಮಾಡುತ್ತೇವೆ ಎಂದು ನಾವು ನಿಮಗೆ ಭರವಸೆ ನೀಡುತ್ತೇವೆ ಎಂದು ಸಂಸ್ಥೆ ಹೇಳಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment