Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ಕಾಂಬೊಡಿಯಾದಲ್ಲಿ ವಿಶ್ವ ಬೃಹತ್ ಸೈಬರ್ ವಂಚಕರ ಜಾಲ ಪತ್ತೆ: 105 ಭಾರತೀಯರು ಸೇರಿ 3000 ಮಂದಿ ಅರೆಸ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 26 ವೀಕ್ಷಣೆಗಳು
cyber crim

ಸೈಬರ್ ವಂಚನೆ ಜಾಲದ ಮೇಲೆ ನೆಲೆಗಳ ಮೇಲೆ ದಾಳಿ ನಡೆಸಿದ ಪೊಲೀಸರು 105 ಭಾರತೀಯರು ಸೇರಿದಂತೆ 3000 ಮಂದಿಯನ್ನು ಬಂಧಿಸಿದ್ದಾರೆ.

ವಿಶ್ವದ ಅತೀ ದೊಡ್ಡ ಸೈಬರ್ ಜಾಲ ಕಾರ್ಯನಿರ್ವಹಿಸುತ್ತಿರುವ ಕಾಂಬೋಡಿಯಾದಲ್ಲಿ ಕಳೆದ 15 ದಿನಗಳಲ್ಲಿ 138 ನೆಲೆಗಳ ಮೇಲೆ ದಾಳಿ ನಡೆಸಿದ ಸ್ಥಳೀಯ ಪೊಲೀಸರು 3000 ಮಂದಿಯನ್ನು ಬಂಧಿಸಿದ್ದಾರೆ. ಇದರಲ್ಲಿ 105 ಭಾರತೀಯರು ಹಾಗೂ 606 ಮಂದಿ ಮಹಿಳೆಯರು ಇದ್ದಾರೆ.

ಕಾಂಬೋಡಿಯಾ ಮತ್ತು ಭಾರತ ನಡುವೆ ಇತ್ತೀಚೆಗೆ ಉನ್ನತ ಮಟ್ಟದ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಬೋಡಿಯಾದಿಂದ ಭಾರತೀಯ ನಾಗರಿಕರನ್ನು ಗುರಿಯಾಗಿಸಿ ನಡೆಸುತ್ತಿದ್ದ ಡಿಜಿಟಲ್ ಅರೆಸ್ಟ್ ಸೇರಿದಂತೆ ಸೈಬರ್ ದಾಳಿ ಮೂಲಕ ಕೋಟ್ಯಂತರ ರೂಪಾಯಿ ಸುಲಿಗೆ ಮಾಡುತ್ತಿದ್ದ ವಂಚಕರ ವಿರುದ್ಧ ಕ್ರಮ ಕೈಗೊಳ್ಳಲು ತೀರ್ಮಾನ ಕೈಗೊಳ್ಳಲಾಗಿತ್ತು.

ದಾಳಿಯ ವೇಳೆ ಭಾರತೀಯರು ಮಾತ್ರವಲ್ಲದೇ ಚೀನಾ, ವಿಯೆಟ್ನಾಂ, ಇಂಡೋನೇಷ್ಯಾ ಸೇರಿದಂತೆ ಹಲವು ರಾಷ್ಟ್ರಗಳ ಪ್ರಜೆಗಳು ಸೇರಿದ್ದಾರೆ. ದಾಳಿಯಲ್ಲಿ ವಂಚಕರ ಬಳಿ ಇದ್ದ ಲ್ಯಾಪ್ ಟಾಪ್, ಪೊಲೀಸ್ ಸಮವಸ್ತ್ರ, ನಕಲಿ ಐಡಿ ಕಾರ್ಡ್, ಡ್ರಗ್ಸ್, ಶಸ್ತ್ರಾಸ್ತ್ರ, ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ಪ್ರಯತ್ನವನ್ನು ಭಾರತ ಆರಂಭಿಸಿದೆ. ಕಾಂಬೊಡಿಯಾದಲ್ಲಿ ಕುಳಿತು ಭಾರತೀಯರನ್ನು ಸೈಬರ್ ಕ್ರೈಮ್ ಮೂಲಕ ವಂಚಿಸುತ್ತಿದ್ದ ಭಾರತೀಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಬಂಧಿತರಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಚೀನಾದವರು ಇದ್ದಾರೆ. ಚೀನಾದ 1028, ವಿಯೆಟ್ನಾಂನ 693, ಇಂಡೋನೇಷ್ಯಾದ 366, ಭಾರತೀಯರು 105, ಬಾಂಗ್ಲಾದೇಶ 101, ಥಾಯ್ಲೆಂಡ್ ನ 82, ಕೊರಿಯಾದ 57, ಪಾಕಿಸ್ತಾನದ 81, ನೇಪಾಳದ 13, ಮಲೇಷ್ಯಾದ ನಾಲ್ವರು ಅಲ್ಲದೇ ನೈಜಿರಿಯಾ, ಫಿಲಿಪ್ಪೆನ್ಸ್, ಉಗಾಂಡ, ಸಿಯಾರಾ ಲೆವೊನ್, ಲಾವೋಸ್, ಮಂಗೋಲಿಯಾ, ರಷ್ಯಾ ಮತ್ತು ಮ್ಯಾನ್ಮರ್ ಸೇರಿದಂತೆ ವಿವಿಧ ದೇಶಗಳ ಪ್ರಜೆಗಳು ಸಿಕ್ಕಿಬಿದ್ದಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment