ಒಡಿಶಾ ಮತ್ತು ಛತ್ತೀಸಗಢ ಗಡಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾಗ ನಕ್ಸಲರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 12 ನಕ್ಸಲರು ಮೃತಪಟ್ಟಿದ್ದಾರೆ.
ಒಡಿಶಾದ ನುಪಾಡ ಜಿಲ್ಲೆ ಮತ್ತು ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯ ನಡುವೆ ಮಂಗಳವಾರ ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ.
ಎರಡು ದಿನಗಳ ಹಿಂದೆಯಷ್ಟೇ ಇಬ್ಬರು ಮಹಿಳಾ ನಕಲ್ಸರು ಶರಣಾದ ಬೆನ್ನಲ್ಲೇ ಸಿಆರ್ ಪಿಎಫ್ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಕ್ಸಲರ ಜಾಡು ಪತ್ತೆಹಚ್ಚಿದ್ದಾರೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.
ನಕ್ಸಲರು ದಟ್ಟ ಅರಣ್ಯದಲ್ಲಿ ಅಡಗಿದ್ದಾರೆ ಎಂಬ ಗುಪ್ತಚರ ಮಾಹಿತಿ ಹಾಗೂ ಸ್ಥಳೀಯ ಮಾಹಿತಿಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಲಾಗಿದ್ದು, 12 ಮಂದಿ ನಕ್ಸಲರು ಹತ್ಯೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೇ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ.