Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ಮಹಿಳಾ ಯೋಜನೆ ಲಾಭ ಪಡೆದ 12,432 ಪುರುಷರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 19 ವೀಕ್ಷಣೆಗಳು

ಮುಂಬೈ: ಮಹಿಳೆಯರ ಸಬಲೀಕರಣಕ್ಕಾಗಿ ಮಹಾರಾಷ್ಟ್ರ ಸರ್ಕಾರ ಕಳೆದ ವರ್ಷ ಆರಂಭಿಸಿದ “ಲಡ್ಕಿ ಬಹಿನ್” ಯೋಜನೆಯಿಂದ ಅಚ್ಚರಿಯ ರೀತಿಯಲ್ಲಿ ಸಾವಿರಾರು ಪುರುಷರು ಸಹ ಲಾಭ ಪಡೆದಿರುವುದು ಬಹಿರಂಗವಾಗಿದೆ. ಒಟ್ಟು 12,432 ಮಂದಿ ಪುರುಷರಿಗೆ ಈ ಯೋಜನೆಯ ಅಡಿಯಲ್ಲಿ ಆರ್ಥಿಕ ನೆರವು ಸಿಕ್ಕಿದೆ ಎಂದು ಸರ್ಕಾರದ ದಾಖಲೆಗಳು ತೋರಿಸಿವೆ.

ಮಹಿಳೆಯರಿಗೆ ಮಾಸಿಕ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ರೂಪಿಸಲಾದ ಈ ಯೋಜನೆ ಅನುಷ್ಠಾನ ಹಂತದಲ್ಲಿ ನಡೆದ ತಪ್ಪು ಹಾಗೂ ಲಾಭಾರ್ಥಿಗಳ ಪರಿಶೀಲನೆ ಪ್ರಕ್ರಿಯೆಯಲ್ಲಿನ ಹುಳುಕುಗಳಿಂದ ಪುರುಷರು ಸಹ ಪಟ್ಟಿಗೆ ಸೇರಿದ್ದಾರೆ ಎನ್ನಲಾಗಿದೆ.

“ಲಡ್ಕಿ ಬಹಿನ್” ಯೋಜನೆಯಡಿ ರಾಜ್ಯದ 21 ರಿಂದ 60 ವರ್ಷದ ಮಹಿಳೆಯರಿಗೆ ಪ್ರತಿ ತಿಂಗಳು ರೂ. 1,500 ಸಹಾಯಧನ ನೀಡಲಾಗುತ್ತಿದೆ. ಇದರಿಂದಾಗಿ ಲಕ್ಷಾಂತರ ಬಡ, ಕಾರ್ಮಿಕ, ರೈತ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದಾರೆ.

ಆದರೆ ಅರ್ಜಿಗಳ ಪರಿಶೀಲನೆಗೆ ಬಳಸಲಾಗಿದ್ದ ತಂತ್ರಜ್ಞಾನ ದೋಷಗಳು, ದಾಖಲೆಗಳ ಸರಿಯಾದ ಸಮನ್ವಯದ ಕೊರತೆ ಹಾಗೂ ಕೆಲ ಸಂದರ್ಭಗಳಲ್ಲಿ ಉದ್ದೇಶಪೂರ್ವಕವಾಗಿ ನೀಡಲಾದ ತಪ್ಪು ಮಾಹಿತಿ ಕಾರಣದಿಂದ ಪುರುಷ ಅರ್ಜಿದಾರರಿಗೂ ಸಹಾಯಧನ ಜಮಾ ಆಗಿರುವುದು ಬಹಿರಂಗವಾಗಿದೆ.

ವಿರೋಧ ಪಕ್ಷಗಳು ಈ ಬೆಳವಣಿಗೆಯನ್ನು ಸರ್ಕಾರದ ನಿರ್ಲಕ್ಷ್ಯ ಮತ್ತು ವ್ಯವಸ್ಥಾಪನಾ ವೈಫಲ್ಯದ ಉದಾಹರಣೆಯೆಂದು ಕಟುವಾಗಿ ಟೀಕಿಸಿವೆ. ಬಿಜೆಪಿ ನಾಯಕರು, “ಮಹಿಳೆಯರ ಹೆಸರಿನಲ್ಲಿ ಪ್ರಚಾರ ಮಾಡಿದ ಯೋಜನೆ ಈಗ ಹಾಸ್ಯಾಸ್ಪದ ಸ್ಥಿತಿಗೆ ತಲುಪಿದೆ.

ಸಾವಿರಾರು ಪುರುಷರಿಗೆ ಹಣ ಸಿಗುವ ಪರಿಸ್ಥಿತಿ ಸರ್ಕಾರದ ಗಂಭೀರ ನಿರ್ಲಕ್ಷ್ಯವನ್ನು ತೋರಿಸುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ ರಾಜ್ಯ ಸರ್ಕಾರ, “ಅನುಷ್ಠಾನ ಹಂತದಲ್ಲಿ ಕೆಲವು ತಾಂತ್ರಿಕ ತಪ್ಪುಗಳು ನಡೆದಿವೆ.

ಈಗಾಗಲೇ ಪರಿಶೀಲನೆ ಆರಂಭವಾಗಿದೆ. ಅರ್ಹರಲ್ಲದವರಿಗೆ ಹಣ ಹೋಗಿದ್ದರೆ, ಅದನ್ನು ವಾಪಸು ಪಡೆಯಲಾಗುವುದು. ಮುಂದೆ ಇಂತಹ ತಪ್ಪುಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದೆ.

ಈ ಘಟನೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಆಡಳಿತವು ಲಡ್ಕಿ ಬಹಿನ್ ಯೋಜನೆಯ ಪಾರದರ್ಶಕತೆ ಹಾಗೂ ಲಾಭಾರ್ಥಿಗಳ ಪರಿಶೀಲನೆ ಪ್ರಕ್ರಿಯೆಯನ್ನು ಇನ್ನಷ್ಟು ಬಲಪಡಿಸಲು ತೀರ್ಮಾನಿಸಿದೆ.

ತಂತ್ರಜ್ಞಾನ ಆಧಾರಿತ ಪರಿಶೀಲನೆ, ಆಧಾರ್ ಹಾಗೂ ಬ್ಯಾಂಕ್ ಖಾತೆಯ ನಿಖರ ಹೊಂದಾಣಿಕೆ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ದ್ವಿತೀಯ ಪರಿಶೀಲನೆ ನಡೆಸುವ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment