ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಹೋಟೆಲ್ ನಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದಾರೆ.
ಸೆಂಟ್ರಲ್ ಕೋಲ್ಕತಾದ ರಿತುರಾಜ್ ಹೋಟೆಲ್ ನಲ್ಲಿ ಮಂಗಳವಾರ ರಾತ್ರಿ 8.,15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 14 ಮಂದಿ ಶವ ಹೊರಗೆ ತೆಗೆಯಲಾಗಿದ್ದು, ಹಲವಾರು ಮಂದಿಯನ್ನು ರಕ್ಷಿಸಲಾಗಿದೆ.
ಅಗ್ನಿ ದುರಂತಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಘಟನೆಯ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಕೋಲ್ಕತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ತಿಳಿಸಿದ್ದಾರೆ.
ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸುಕಂತಾ ಮಂಜುಂದಾರ್, ಕೋಲ್ಕತಾದಲ್ಲಿ ಹೋಟೆಲ್ ಗಳ ಸುರಕ್ಷತಾ ಮಾರ್ಗಸೂಚಿ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.


