ನಿಯಂತ್ರಣ ತಪ್ಪಿದ ಲಾರಿಯೊಂದು ದೇವಸ್ಥಾನಕ್ಕೆ ನುಗ್ಗಿದ್ದರಿಂದ 15 ಭಕ್ತರು ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ.
ಗ್ವಾಲಿಯರ್ ನಲ್ಲಿ ಶನಿವಾರ ತಡರಾತ್ರಿ 1.30ರ ಸುಮಾರಿಗೆ ಶೀಟ್ಲಾ ಮಾತಾ ದೇವಸ್ಥಾನದ ಬಳಿ ಈ ದುರಂತ ಸಂಭವಿಸಿದೆ. ೩೯ಕ್ಕೂ ಅಧಿಕ ಭಕ್ತರು ಗಾಯಗೊಂಡಿದ್ದಾರೆ.
ನಿಯಂತ್ರಣ ತಪ್ಪಿದ ಲಾರಿ ಪೊಲೀಸ್ ಚೌಕಿಗೆ ಡಿಕ್ಕಿ ಹೊಡೆದು ನಂತರ ಸಮೀಪದಲ್ಲೇ ಇದ್ದ ದೇವಸ್ಥಾನದ ಗೋಡೆಗೆ ಡಿಕ್ಕಿ ಹೊಡೆದಿದೆ. ಗೋಡೆ ಕುಸಿದು ದೇವಸ್ಥಾನದಲ್ಲಿದ್ದ ಭಕ್ತರ ಮೇಲೆ ಬಿದ್ದಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
