ವಕ್ಫ್ ತಿದ್ದುಪಡಿ ಮಸೂದೆಯನ್ನು ಬೆಂಬಲಿಸಿದ ಜೆಡಿಯು ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಅಲ್ಪಸಂಖ್ಯಾತ ವಿಭಾಗದ ಇಬ್ಬರು ಪ್ರಮುಖ ಮುಖಂಡರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷಕ್ಕೆ ಹಿರಿಯ ನಾಯಕ ಮೊಹಮದ್ ಕಾಸಿಂ ಅನ್ಸಾರಿ ಮತ್ತು ಮೊಹಮದ್ ಅಶ್ರಫ್ ಅನ್ಸಾರಿ ರಾಜೀನಾಮೆ ಸಲ್ಲಿಸಿದ್ದಾರೆ.
ವಕ್ಫ್ ತಿದ್ದುಪಡಿ ಮಸೂದೆಗೆ ಬೆಂಬಲ ನೀಡುವ ಮೂಲಕ ಜೆಡಿಯು ಪಕ್ಷ ಮುಸ್ಲಿಂ ಸಮುದಾಯಕ್ಕೆ ವಂಚಿಸಿ ನೋವುಂಟು ಮಾಡಿದೆ. ಪಕ್ಷದ ಮೇಲಿದ್ದ ನಂಬಿಕೆ ಹುಸಿಯಾಗಿದೆ. ಈ ಹಿನ್ನೆಲೆಯಲ್ಲಿ ಪಕ್ಷದಿಂದ ಹೊರಬರಲು ನಿರ್ಧರಿಸಿದ್ದೇವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.


