ಗುಜರಾತ್‌ನಲ್ಲಿ ಅಕ್ರಮ ವಲಸಿಗರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಲಾಗಿದ್ದು, 2000 ಪೊಲೀಸರು, 50 ಬುಲ್ಡೋಜರ್ ಹಾಗೂ 50ಕ್ಕೂ ಹೆಚ್ಚು 200 ಟ್ರಕ್ ಬಳಸಿ ಮನೆಗಳನ್ನು ನೆಲಸಮಗೊಳಿಸಲಾಗಿದೆ.
ಅಹಮದಾಬಾದ್ ನ ಚಂಡೋಲಾ ಸರೋವರದ ಬಳಿ ಸೋಮವಾರ ತಡರಾತ್ರಿ ನಡೆದ ದೇಶದ ಅತಿ ದೊಡ್ಡ ಅಕ್ರಮ ಬುಲ್ಡೋಜರ್ ಕಾರ್ಯಾಚರಣೆ ಇದಾಗಿದೆ. ಬಾಂಗ್ಲಾದೇಶದ ಅಕ್ರಮ ವಲಸಿಗರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದರು ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದ್ದು, 800ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಅತಿ ಹೆಚ್ಚು ಬಾಂಗ್ಲಾದೇಶದ ಅಕ್ರಮ ವಲಸಿಗರು ಇದ್ದಾರೆ ಎಂಬ ಮಾಹಿತಿ ಮೇರೆಗೆ ದಿಢೀರ್ ಕಾರ್ಯಾಚರಣೆ ನಡೆಸಲಾಗಿದೆ. ಈ ಪ್ರದೇಶದಿಂದ 800 ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಕಾರ್ಯಾಚರಣೆ ಸಂಬಂಧ ತುರ್ತು ವಿಚಾರಣೆ ನಡೆಸಬೇಕು ಎಂದು 18 ಅರ್ಜಿದಾರರು ಗುಜರಾತ್ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಇದೇ ವೇಳೆ ಕಾರ್ಯಾಚರಣೆ ಖಂಡಿಸಿ ಸ್ಥಳೀಯರು ಕೋರ್ಟ್ ಮೊರೆ ಹೋಗಿದ್ದಾರೆ.
ಹಲವರು ನಿವಾಸಿಗಳು ಬಾಂಗ್ಲಾದೇಶಿಗಳಲ್ಲ. ಅವರ ಮನೆಗಳನ್ನು ತಪ್ಪಾಗಿ ನೆಲಸಮ ಮಾಡಲಾಗುತ್ತಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.
ಯಾರೊಬ್ಬರ ವಿದೇಶಿ ಸ್ಥಾನಮಾನವನ್ನು ನಿರ್ಧರಿಸುವುದು ವಿದೇಶಿಯರ ನ್ಯಾಯಮಂಡಳಿಯ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ, ಸರಿಯಾದ ಕಾನೂನು ಆಧಾರವಿಲ್ಲದೆ ಮನೆಗಳನ್ನು ನೆಲಸಮಗೊಳಿಸುವುದನ್ನು ಸಮರ್ಥಿಸಲಾಗುವುದಿಲ್ಲ ಎಂದು ಉಲ್ಲೇಖಿಸಿದ್ದಾರೆ.


