10ನೇ ತರಗತಿಯ ಮೂವರು ವಿದ್ಯಾರ್ಥಿಗಳು ಬೈಕ್ ಮೇಲೆ ಪ್ರಯಾಣಿಸುತ್ತ ರೀಲ್ಸ್ ಮಾಡುತ್ತಿದ್ದಾಗ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಬಿಹಾರದಲ್ಲಿ ಸಂಭವಿಸಿದೆ.
ರಾಜಧಾನಿ ಲಕ್ನೋದಿಂದ 170 ಕಿ.ಮೀ. ದೂರದ ಬರಿಯಾಪುರ್ ಸುಲ್ತಾನ್ ರಾಜ್ ಬಳಿಯ ರಾಷ್ಟ್ರೀಯ ಹೆದ್ದಾರಿ ೮೦ರ ಮುಂಗೇರಿಯಲ್ಲಿ ಈ ಘಟನೆ ಸಂಭವಿಸಿದ್ದು, ಶುಭಮನ್ ಮತ್ತು ಆನಂದ್ ಕುಮಾರ್ ದುರಂತದಲ್ಲಿ ಅಸುನೀಗಿದ್ದಾರೆ. ಸೋನುಕುಮಾರ್ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ ೮೦ರಲ್ಲಿ ಒಂದೇ ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಾ ರೀಲ್ಸ್ ಮಾಡುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಶಾಲಾ ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ.


