Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

3000 ಕೋಟಿ ಸಾಲಕ್ಕೆ ಬ್ಯಾಂಕ್ ಅಧಿಕಾರಿಗಳಿಗೆ ರಿಲಾಯನ್ಸ್ ಲಂಚ: ಅನಿಲ್ ಅಂಬಾನಿಗೆ ಇಡಿ ಗಾಳ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 69 ವೀಕ್ಷಣೆಗಳು
Anil Ambani
Anil Ambani

3000 ಕೋಟಿ ರೂ. ಸಾಲ ಪಡೆಯಲು ಬ್ಯಾಂಕ್ ಅಧಿಕಾರಿಗಳಿಗೆ ಲಂಚ ನೀಡಿದ್ದಕ್ಕಾಗಿ ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಾಯನ್ಸ್ ಕಂಪನಿಯ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅನಿಲ್ ಅಂಬಾನಿ ಒಡೆತನದ ದೆಹಲಿ, ಮುಂಬೈ ಸೇರಿದಂತೆ ವಿವಿಧ ನಗರಗಳಲ್ಲಿ 35ಕ್ಕೂ ಹೆಚ್ಚು ಸ್ಥಳಗಳಲ್ಲಿರುವ ರಿಲಯನ್ಸ್ ಗ್ರೂಪ್‌ನ 50 ಕಂಪನಿಗಳ ಮೇಲೆ ಗುರುವಾರ ಬೆಳಿಗ್ಗೆ ಇಡಿ ದಾಳಿ ನಡೆಸಿದ್ದು, 25ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗೊಳಪಡಿಸಿದೆ.

3000 ಕೋಟಿ ರೂ. ಸಾಲ ಪಡೆಯಲು ಯೆಸ್ ಬ್ಯಾಂಕ್ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದ ಮೇಲೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಇಡಿ ದಾಳಿ ನಡೆಸಿದೆ ಎನ್ನಲಾಗಿದೆ.

ಅನಿಲ್ ಅಂಬಾನಿ ವಿರುದ್ಧ ದಾಖಲಾಗಿರುವ 2 ಎಫ್‌ಐಆರ್‌ ಅನ್ವಯ ಬ್ಯಾಂಕ್ ಆಫ್ ಬರೋಡಾ, ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಮತ್ತಿತರ ಏಜೆನ್ಸಿಗಳಿಂದ ದೊರೆತ ಮಾಹಿತಿ ಆಧಾರದಲ್ಲಿ ಶೋಧ ನಡೆಸುತ್ತಿದೆ.

2017 ಮತ್ತು 2019ರ ನಡುವೆ ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್ ಅಡಿಯಲ್ಲಿರುವ ಸಂಸ್ಥೆಗಳಿಗೆ ಯೆಸ್‌ ಬ್ಯಾಂಕ್‌ 3,000 ಕೋಟಿ ರೂ. ಸಾಲ ನೀಡಿತ್ತು. ಈ ಸಾಲದ ಹಣವನ್ನು ಗ್ರೂಪ್‌ನ ಇತರ ಶೆಲ್‌ ಕಂಪನಿಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಈ ಮೂಲಕ ಬ್ಯಾಂಕ್‌ಗಳು, ಷೇರುದಾರರು, ಹೂಡಿಕೆದಾರರು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳನ್ನ ವಂಚಿಸುವ ಮೂಲಕ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು ಇಡಿ ಪತ್ತೆ ಮಾಆಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಸಾಕ್ಷ್ಯಾಧಾರ ಸಿಕ್ಕಿರುವುದಾಗಿ ಹೇಳಿದೆ.

ಸಾಲ ಅನುಮೋದನೆ ವಿಚಾರದಲ್ಲಿ ಯೆಸ್ ಬ್ಯಾಂಕ್ ನಡೆ ಅನುಮಾನ ಹುಟ್ಟಿಸಿದೆ. ಸಾಲ ನೀಡುವಾಗ ಕಂಪನಿಗಳು, ಸಾಮಾನ್ಯ ನಿರ್ದೇಶಕರಿಗೆ ಸಂಬಂಧಿಸಿದಂತೆ ಸರಿಯಾಗಿ ಅವಲೋಕನ ಮಾಡದೆ ಸಾಲದ ಹಣ ಬಿಡುಗಡೆ ಮಾಡಲಾಗಿದೆ ಎಂದು ಇಡಿ ತಿಳಿಸಿದೆ. 3,000 ಕೋಟಿ ಸಾಲ ಮಂಜೂರು ಮಾಡುವಲ್ಲಿ ಯೆಸ್‌ ಬ್ಯಾಂಕ್‌ನ ಸಿಇಒ ಹಾಗೂ ಇತರರು ಭಾಗಿಯಾಗಿದ್ದಾರೆ.

ರಿಲಯನ್ಸ್ ಹೋಮ್ ಫೈನಾನ್ಸ್ ನಲ್ಲಿ ಅಕ್ರಮ ನಡೆದಿರುವ ಬಗ್ಗೆ ಸೆಬಿ ವರದಿ ಸಲ್ಲಿಸಿದ್ದು, ಸಂಸ್ಥೆಯ ಕಾರ್ಪೊರೇಟ್ ಸಾಲ ಬಂಡವಾಳವು 2017-18ನೇ ಹಣಕಾಸು ವರ್ಷದಲ್ಲಿ 3,742 ಕೋಟಿ ರೂ.ಗಳಷ್ಟಿತ್ತು. 2018-19ನೇ ಹಣಕಾಸು ವರ್ಷದಲ್ಲಿ ಇದರ ಪ್ರಮಾಣ 8,670 ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ಹೇಳಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment