ಪಾದಚಾರಿಗೆ ಡಿಕ್ಕಿ ಹೊಡೆದ ನಂತರ ಆಂಬುಲೆನ್ಸ್ ಪಲ್ಟಿ ಹೊಡೆದ ಕಾರಣ ನಾಲ್ವರು ಮೃತಪಟ್ಟು 5 ಮಂದಿ ಗಾಯಗೊಂಡ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ.
ಸೆನೊಯಿ ಜಿಲ್ಲೆಯ ಜಬಲಪುರ- ನಾಗ್ಪುರ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ.
ಆಂಧ್ರಪ್ರದೇಶದ ಕರ್ನೂಲ್ ನಿಂದ ಗಾಯಗೊಂಡಿದ್ದ ಅನಿಶ್ ಶಾ (18) ಅವರನ್ನು ಅವರ ತವರೂರಾದ ಬಿಹಾರದ ಚಂಪರಣ್ ಜಿಲ್ಲೆಗ ಆಂಬುಲೆನ್ಸ್ ನಲ್ಲಿ ಕರೆದೊಯ್ಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಆಂಬುಲೆನ್ಸ್ ನಲ್ಲಿ ಇಬ್ಬರು ಚಾಲಕರು ಹಾಗೂ ಕುಟುಂಬದ 6 ಸದಸ್ಯರು ಪ್ರಯಾಣಿಸುತ್ತಿದ್ದರು. ರಂಗಲಾಲ್ ಕುಲಸ್ಟೆ ಬಳಿ ಪಾದಚಾರಿಗೆ ಡಿಕ್ಕಿ ಹೊಡೆದ ಆಂಬುಲೆನ್ಸ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.
ಮೃತಪಟ್ಟವರು ಒಂದೇ ಕುಟುಂಬದವರಾಗಿದ್ದು, ಗಾಯಗೊಂಡವರನ್ನು ಜಬಲಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.