ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟದಿಂದ ಸಂಭವಿಸಿದ ಪ್ರವಾಹ ಹಾಗೂ ಭೂಕುಸಿತದಿಂದ 63 ಮಂದಿ ಸಾವಿಗೀಡಾಗಿದ್ದು, 15ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ.
ಮುಂಗಾರು ಅಬ್ಬರಕ್ಕೆ ರಾಜ್ಯದ ಜನರು ತತ್ತರಿಸಿದ್ದು, ಜುಲೈ 7ವರೆಗೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಅಬ್ಬರದಿಂದ ಹಿಮಾಚಲ ಪ್ರದೇಶದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 400 ಕೋಟಿ ರೂ.ಗೂ ಅಧಿಕ ನಷ್ಟ ಉಂಟಾಗಿದೆ.
ಪ್ರವಾಹ ಹಾಗೂ ಭೂಕುಸಿತಗಳ ನಡುವೆ ಪರಿಹಾರ ಹಾಗೂ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಾಥಮಿಕ ವರದಿ ಪ್ರಕಾರ 400 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಮಳೆಯ ಅಬ್ಬರ ಕಡಿಮೆ ಆದ ನಂತರ ನಷ್ಟದ ಅಂದಾಜು ಲೆಕ್ಕಾಚಾರ ನಡೆಯಲಿದೆ ಎಂದು ಅವರು ಹೇಳಿದರು.
ಕೇಂದ್ರ ಗೃಹ ಸಚಿವ ಮುಂಗಾರು ಮಳೆಯಿಂದ ಹಾನಿಗೊಳಗಾದ ಹಿಮಾಚಲ ಪ್ರದೇಶ ಅಲ್ಲದೇ ಗುಜರಾತ್, ಉತ್ತರಾಖಂಡ್, ಚಂಡೀಗಢ್ ಮತ್ತು ರಾಜಸ್ಥಾನ್ ರಾಜ್ಯಗಳಿಗೂ ನೆರವು ನೀಡುವುದಾಗಿ ಘೋಷಿಸಿದ್ದಾರೆ.


