ಏರ್ ಟ್ರಾಫಿಕ್ ಕಂಟ್ರೋಲ್ ವ್ಯವಸ್ಥೆಯಲ್ಲಿ ಉಂಟಾದ ತಾಂತ್ರಿಕ ದೋಷದಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ 800ಕ್ಕೂ ಹೆಚ್ಚು ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದ ಪ್ರಯಾಣಿಕರು ಪರದಾಡಿದ್ದಾರೆ.
ಗುರುವಾರ ತಡರಾತ್ರಿ ಕಾಣಿಸಿಕೊಂಡ ತಾಂತ್ರಿಕ ದೋಷ ಶುಕ್ರವಾರ ರಾತ್ರಿವರೆಗೂ ತಾಂತ್ರಿಕ ದೋಷ ಇದ್ದಿದ್ದರಿಂದ ಟರ್ಮಿನಲ್ ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪ್ರಯಾಣಿಕರು ಸರದಿ ಸಾಲಿನಲ್ಲಿ ನಿಂತಿದ್ದು, ಊರುಗಳಿಗೆ ತೆರಳಲು ಆಗದೇ ಕಾದು ನಿಂತು ಬಳಲುತ್ತಿದ್ದರು.
ಸ್ವಯಂಚಾಲಿತ ಮೆಸೇಜ್ ಸ್ವಿಚ್ಚಿಂಗ್ ವ್ಯವಸ್ಥೆಯಲ್ಲಿ ಲೋಪ ಕಂಡು ಬಂದಿದೆ. ಇದು ವಿಮಾನಗಳ ಸಂಚಾರ ವ್ಯವಸ್ಥೆ ನಿಯಂತ್ರಿಸುವ ಸ್ವಯಂ ಚಾಲಿತ ಟ್ರ್ಯಾಕ್ ವ್ಯವಸ್ಥೆಗೆ ಅಗತ್ಯವಾಗಿತ್ತು. ಶುಕ್ರವಾರ ತಡರಾತ್ರಿ ವೇಳೆಗೆ ದೋಷ ಸರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


