Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ಬಸ್ ಚಲಿಸುವಾಗ ಹೃದಾಯಾಘಾತ: ಸಾವಿನಲ್ಲೂ ಸಮಯಪ್ರಜ್ಞೆ ಮೆರೆದ ಬಿಎಂಟಿಸಿ ಚಾಲಕ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 25 ವೀಕ್ಷಣೆಗಳು
bmtc
bmtc

ಬಸ್ ಚಲಿಸುತ್ತಿರುವಾಗಲೇ ಹೃದಯಾಘಾತದಿಂದ ಬಿಎಂಟಿಸಿ ಚಾಲಕ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ನೆಲಮಂಗಲ ಟೌನ್ ಬಳಿ ಬಿನ್ನಮಂಗಲದಲ್ಲಿ ಸಂಭವಿಸಿದೆ. ಸಾವಿನ ದವಡೆಯಲ್ಲೂ ಚಾಲಕ ಸಮಯಪ್ರಜ್ಞೆ ಮೆರೆದಿದ್ದರಿಂದ ಪ್ರಯಾಣಿಕರು ಪಾರಾಗಿದ್ದಾರೆ.

ಡಿಪೋ 40ರಲ್ಲಿ ಕಳೆದ 6 ವರ್ಷದಿಂದ ಡೈವರ್ ಆಗಿ ಕೆಲಸ ಮಾಡುತ್ತಿದ್ದ ಹಾಸನ ಮೂಲದ ಚಾಲಕ ಕಿರಣ್‌ ಕುಮಾರ್ (40) ಮೃತ ಚಾಲಕ.

ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಡಿಪೋಗೆ ಸೇರಿದ ಬಸ್ ಡ್ರೈವ್​ ಮಾಡಿಕೊಂಡು ಬುಧವಾರ ಬೆಳಿಗ್ಗೆ ಹೋಗುತ್ತಿರುವಾಗ ಹೃದಯಾಘಾತವಾಗಿದೆ. ಕೂಡಲೇ ಚಾಲಕ ಕಿರಣ್‌ಕುಮಾರ್ ಬಸ್ ಅನ್ನು ರಸ್ತೆಬದಿ ನಿಲ್ಲಿಸಿದ್ದಾರೆ. ಇದರಿಂದ ಬಸ್ ನಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರು ಪಾರಾಗಿದ್ದಾರೆ.

ಬಸ್ ಚಾಲನೆ ಮಾಡುವಾಗಲೇ ಹೃದಯಘಾತವಾಗಿದ್ದರೂ ಸಮಯಪ್ರಜ್ಞೆ ತೋರಿದ ಚಾಲಕ ರಸ್ತೆ ಬದಿ ಬಸ್ ಯಶಸ್ವಿಯಾಗಿ ನಿಲ್ಲಿಸಿದ್ದಾರೆ. ಕೂಡಲೇ ಪ್ರಯಾಣಿಕರು ನಿರ್ವಾಹಕ ಒಬಳೇಶ್‌ ಸಹಾಯದಿಂದ ಚಾಲಕನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಾಗಲೇ ಕಿರಣ್‌ಕುಮಾರ್ ಕೊನೆಯುಸಿರೆಳೆದಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment