Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ಪೆಟ್ರೋಲ್‌, ಡೀಸೆಲ್‌ ನಂತರ ವಾಣಿಜ್ಯ ಗ್ಯಾಸ್‌ ಸಿಲಿಂಡರ್‌ ದರ 42 ರೂ. ಏರಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 21 ವೀಕ್ಷಣೆಗಳು
gas cylender

ನವದೆಹಲಿ/ಬೆಂಗಳೂರು: ಪೆಟ್ರೋಲ್‌, ಡೀಸೆಲ್‌, ಸಿಎನ್‌ಜಿ ದರಗಳ ಸತತ ಏರಿಕೆ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ವಾಣಿಜ್ಯ ಸಿಲಿಂಡರ್‌ ದರ ಏರಿಸಿ ಮತ್ತೊಂದು ಆಘಾತ ನೀಡಿದೆ.

ಜೂನ್‌ 1ರಿಂದಲೇ ಅನ್ವಯವಾಗುವಂತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ 42 ರೂ. ಏರಿಕೆ ಮಾಡಲಾಗಿದೆ.

ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಬಳಕೆ ಸಿಲಿಂಡರ್‌ ದರ 42 ರೂ. ಹೆಚ್ಚಾಗಿದ್ದು, ಪ್ರತಿ ಸಿಲಿಂಡರ್‌ ಬೆಲೆ 3,113.5 ರೂ.ಗಳಿಗೆ ತಲುಪಿದ್ದರೆ, ಬೆಂಗಳೂರಿನಲ್ಲಿ 46 ರೂ.ಗಳಷ್ಟು ಹೆಚ್ಚಳವಾಗಿ ಪ್ರತಿ ಸಿಲಿಂಡರ್ ದರ 3,198 ರೂ.ಗಳಿಗೆ ಏರಿಕೆಯಾಗಿದೆ.

ಕೋಲ್ಕತ್ತಾದಲ್ಲಿ 19 ಕೆಜಿ ಸಿಲಿಂಡರ್‌ ದರ 53.5 ರೂ. ಹೆಚ್ಚಾಗಿದ್ದು, 3,255.5 ರೂ. ತಲುಪಿದೆ. ಇದರೊಂದಿಗೆ 5 ಕೆಜಿ ಫ್ರೀ ಟ್ರೇಡ್ ಎಲ್‌ಪಿಜಿ (FTL) ಸಿಲಿಂಡರ್‌ಗಳ ಮೇಲಿನ ಬೆಲೆ 11 ರೂ. ಹೆಚ್ಚಿಸಿದ್ದು, ಪ್ರತಿ ಸಿಲಿಂಡರ್‌ ಬೆಲೆ 821.5 ರೂ.ಗಳಿಗೆ ತಲುಪಿದೆ.

ತಿಂಗಳಲ್ಲಿ 2ನೇ ಬಾರಿಗೆ ದರ ಏರಿಕೆ?

ಇದು ಕಳೆದ ಮೇ 1 ರಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ 2ನೇ ಬಾರಿಗೆ ಮಾಡಿದ ಬೆಲೆ ಏರಿಕೆಯಾಗಿದೆ. ಪಂಚ ರಾಜ್ಯಗಳ ಚುನಾವಣೆ ಮುಗಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಮೇ 1 ರಂದು ಏಕಾಏಕಿ ಪ್ರತಿ ವಾಣಿಜ್ಯ ಸಿಲಿಂಡರ್‌ ಮೇಲಿನ ಬೆಲೆಯನ್ನು 993 ರೂ.ಗಳಷ್ಟು ಹೆಚ್ಚಳ ಮಾಡಿತ್ತು. ಆದಾಗ್ಯೂ ತೈಲ ಕಂಪನಿಗಳು ಸಾಕಷ್ಟು ನಷ್ಟ ಅನುಭವಿಸುತ್ತಿರುವುದರಿಂದ ಬೆಲೆ ಏರಿಕೆಯು ಅನಿವಾರ್ಯವಾಗಿದೆ ಎಂದು ಸರ್ಕಾರ ಹೇಳಿದೆ.

ಶುಕ್ರವಾರ ನಡೆದ ಅಂತರ ಸಚಿವಾಲಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ, ಕೇಂದ್ರ ಸರ್ಕಾರವು ಕಾರ್ಯತಂತ್ರದ ನಿಕ್ಷೇಪಗಳನ್ನ ನಿರ್ಮಿಸಲು ಕೆಲಸ ಮಾಡುತ್ತಿದೆ. ತೈಲ ಮಾರುಕಟ್ಟೆ ಕಂಪನಿಗಳಿಗೆ ಕನಿಷ್ಠ 30 ದಿನಗಳ ಎಲ್‌ಪಿಜಿ ನಿಕ್ಷೇಪ ಕಾಯ್ದುಕೊಳ್ಳಲು ನಿರ್ದೇಶನ ನೀಡಿದೆ ಎಂದು ಹೇಳಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment