Monday, 16 November 2026 — Kannadavahini
BREAKING NEWS
ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ!
ದೇಶ

ಭಾರತೀಯ ವಾಯುಪಡೆಯ ಮುಖ್ಯಸ್ಥರಾಗಿ ಅಶುತೋಷ್ ದೀಕ್ಷಿತ್ ನೇಮಕ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
4 ನಿಮಿಷ ಓದು 35 ವೀಕ್ಷಣೆಗಳು
Air Marshal Ashutosh Dixit appointed as next IAF chief

ನವದೆಹಲಿ:ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಭಾರತೀಯ ವಾಯುಪಡೆಯ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್ ಅವರ ಸ್ಥಾನಕ್ಕೆ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರು ನೇಮಕಗೊಂಡಿದ್ದಾರೆ.

ಸುಮಾರು ನಾಲ್ಕು ದಶಕಗಳ ಸೇವಾನುಭವ ಹೊಂದಿರುವ ಫೈಟರ್ ಪೈಲಟ್ ಆದ ಅವರು, ದೇಶೀಯ ತಂತ್ರಜ್ಞಾನದ ಲಘು ಯುದ್ಧ ವಿಮಾನ (ಎಲ್​ಸಿಎ) ತೇಜಸ್ ಕಾರ್ಯಕ್ರಮ ಮತ್ತು ಇತರ ಭಾರತೀಯ ವಿಮಾನ ಯೋಜನೆಗಳಲ್ಲಿ ನಿಕಟವಾಗಿ ತೊಡಗಿಸಿಕೊಂಡಿದ್ದಾರೆ.

ವಾಯುಪಡೆಯ ಉಪ ಮುಖ್ಯಸ್ಥರಾಗುವ ಮೊದಲು, ಅವರು ಸೆಂಟ್ರಲ್ ಏರ್ ಕಮಾಂಡ್‌ನ ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಮತ್ತು ನಂತರ ಸ್ವೀಫ್ಸ್ ಆಫ್ ಸ್ಟಾಫ್ ಕಮಿಟಿಯ ಅಧ್ಯಕ್ಷರಿಗೆ ಇಂಟಿಗ್ರೇಟೆಡ್ ಡಿಫೆನ್ಸ್ ಸ್ಟಾಫ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

ಅನಿಲ್ ಕೌಶಲ್ ನಂತರ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಅಶುತೋಷ್ ದೀಕ್ಷಿತ್ ಭಾರತೀಯ ವಾಯುಪಡೆಯಲ್ಲಿ ಸುಮಾರು 4 ದಶಕಗಳ ಸುದೀರ್ಘ ಸೇವಾ ಅನುಭವವನ್ನು ಹೊಂದಿದ್ದಾರೆ. ಇವರು ತಮ್ಮ ವೃತ್ತಿಜೀವನದಲ್ಲಿ ಒಟ್ಟು 3,500ಕ್ಕೂ ಹೆಚ್ಚು ಗಂಟೆಗಳ ಕಾಲ ವಿಮಾನ ಹಾರಾಟ ನಡೆಸಿದ ಅನುಭವ ಹೊಂದಿದ್ದಾರೆ.

ಯಾರೀ ಅಶುತೋಷ್ ದೀಕ್ಷಿತ್:

ಅಶುತೋಷ್ ದೀಕ್ಷಿತ್ 1986ರ ಡಿಸೆಂಬರ್ 6ರಂದು ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ಸೇರ್ಪಡೆಗೊಂಡರು. ಇವರು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್​ಡಿಎ), ಬಾಂಗ್ಲಾದೇಶದ ಡಿಫೆನ್ಸ್ ಸ್ಟಾಫ್ ಸರ್ವಿಸ್ ಕಾಲೇಜು ಮತ್ತು ನ್ಯಾಷನಲ್ ಡಿಫೆನ್ಸ್ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಇವರು 3,500ಕ್ಕೂ ಹೆಚ್ಚು ಗಂಟೆಗಳ ವಿಮಾನ ಹಾರಾಟದ ಅನುಭವವನ್ನು ಹೊಂದಿದ್ದಾರೆ.

ಫೈಟರ್ ಸ್ಟ್ರೀಮ್‌ಗೆ ಸೇರಿದ ಏರ್ ಮಾರ್ಷಲ್ ದೀಕ್ಷಿತ್ ಡಿಸೆಂಬರ್ 6, 1991ರಂದು ಫ್ಲೈಟ್ ಲೆಫ್ಟಿನೆಂಟ್, ಮೇ 5, 2003ರಂದು ವಿಂಗ್ ಕಮಾಂಡರ್, ಮಾರ್ಚ್ 1, 2009ರಂದು ಗ್ರೂಪ್ ಕ್ಯಾಪ್ಟನ್ ಮತ್ತು ಜೂನ್ 17, 2013ರಂದು ಏರ್ ಕಮೋಡೋರ್ ಆಗಿ ಬಡ್ತಿ ಪಡೆದರು. ನಂತರ ಜೂನ್ 11, 2019ರಂದು ಏರ್ ವೈಸ್ ಮಾರ್ಷಲ್, ಅಕ್ಟೋಬರ್ 1, 2022ರಂದು ಏರ್ ಮಾರ್ಷಲ್ ಮತ್ತು ಸೆಪ್ಟೆಂಬರ್ 1, 2024ರಂದು ಕಮಾಂಡರ್-ಇನ್-ಚೀಫ್ ಆಗಿ ಬಡ್ತಿ ಪಡೆದರು. ಇವರು ಕೆಡೆಟ್ ಆಗಿ 69ನೇ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಕೋರ್ಸ್ ಮತ್ತು ಏರ್ ಕಮೋಡೋರ್ ಆಗಿ 57ನೇ ನ್ಯಾಷನಲ್ ಡಿಫೆನ್ಸ್ ಕಾಲೇಜು ಕೋರ್ಸ್ ಪೂರ್ಣಗೊಳಿಸಿದ್ದಾರೆ.

ಕಮಾಂಡಿಂಗ್ ಆಫೀಸರ್:

ಅಶುತೋಷ್ ದೀಕ್ಷಿತ್ ಅವರು ಡಿಸೆಂಬರ್ 15, 2003ರಿಂದ ಜನವರಿ 15, 2006ರವರೆಗೆ ಗ್ವಾಲಿಯರ್‌ನಲ್ಲಿರುವ ನಂ. 9 ಸ್ಕ್ವಾಡ್ರನ್‌ನ ಕಮಾಂಡಿಂಗ್ ಆಫೀಸರ್ ಆಗಿ ಸೇವೆ ಸಲ್ಲಿಸಿದರು. ದೆಹಲಿಯ ಏರ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ಏರ್ ಸ್ಟಾಫ್ ರಿಕ್ವೈರ್‌ಮೆಂಟ್ಸ್‌ನ ಪ್ರಿನ್ಸಿಪಾಲ್ ಡೈರೆಕ್ಟರ್ ಆಗಿಯೂ ಕಾರ್ಯನಿರ್ವಹಿಸಿದರು. ಜನವರಿ 2018ರಿಂದ ಮೇ 2019ರವರೆಗೆ ಬೀದರ್‌ನ ಏರ್ ಫೋರ್ಸ್ ಸ್ಟೇಷನ್‌ನಲ್ಲಿ ಏರ್ ಆಫೀಸರ್ ಕಮಾಂಡಿಂಗ್ ಆಗಿ ಮತ್ತು ನಂತರ ತಿರುವನಂತಪುರಂನ ಸದರ್ನ್ ಏರ್ ಕಮಾಂಡ್‌ನಲ್ಲಿ ಏರ್ ಡಿಫೆನ್ಸ್ ಕಮಾಂಡರ್ ಆಗಿ ಸೇವೆ ಸಲ್ಲಿಸಿದರು.

ಅಕ್ಟೋಬರ್ 2020ರಿಂದ ಸೆಪ್ಟೆಂಬರ್ 2021ರವರೆಗೆ ದೆಹಲಿಯ ಏರ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ಪ್ರೊಜೆಕ್ಟ್ಸ್ ವಿಭಾಗದ ಅಸಿಸ್ಟೆಂಟ್ ಚೀಫ್ ಆಫ್ ಏರ್ ಸ್ಟಾಫ್ ಆಗಿ ಹಾಗೂ ಅಕ್ಟೋಬರ್ 2021ರಿಂದ ಸೆಪ್ಟೆಂಬರ್ 2022ರವರೆಗೆ ಪ್ಲಾನ್ಸ್ ವಿಭಾಗದ ಅಸಿಸ್ಟೆಂಟ್ ಚೀಫ್ ಆಫ್ ಏರ್ ಸ್ಟಾಫ್ ಆಗಿ ಕಾರ್ಯನಿರ್ವಹಿಸಿದರು.

ಏರ್ ಮಾರ್ಷಲ್:

ಏರ್ ಮಾರ್ಷಲ್ ಆಗಿ, ಸೌತ್ ವೆಸ್ಟರ್ನ್ ಏರ್ ಕಮಾಂಡ್‌ನಲ್ಲಿ ಸೀನಿಯರ್ ಏರ್ ಸ್ಟಾಫ್ ಆಫೀಸರ್, ಏರ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ಡೆಪ್ಯೂಟಿ ಚೀಫ್ ಆಫ್ ಏರ್ ಸ್ಟಾಫ್ ಮತ್ತು ಅಲಹಾಬಾದ್‌ನ ಸೆಂಟ್ರಲ್ ಏರ್ ಕಮಾಂಡ್‌ನ ಏರ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸಿದ್ದಾರೆ. ಜುಲೈ 2026ರಿಂದ ದೆಹಲಿಯ ಏರ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ಆಪರೇಷನ್ಸ್ ವಿಭಾಗದ ಪ್ರಿನ್ಸಿಪಾಲ್ ಸ್ಟಾಫ್ ಆಫೀಸರ್ ಹಾಗೂ ವಾಯುಪಡೆಯ ಉಪ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಏರ್ ಮಾರ್ಷಲ್ ದೀಕ್ಷಿತ್ ಅವರು ವಾಯು ಸೇನಾ ಪದಕ, ವಿಶಿಷ್ಟ ಸೇವಾ ಪದಕ ಮತ್ತು ಅತಿ ವಿಶಿಷ್ಟ ಸೇವಾ ಪದಕಗಳನ್ನು ಪಡೆದಿದ್ದಾರೆ. 2006ರಲ್ಲಿ ಅವರ ಅತ್ಯುತ್ತಮ ಕರ್ತವ್ಯ ನಿಷ್ಠೆಗಾಗಿ ‘ವಾಯು ಸೇನಾ ಪದಕ’ ನೀಡಿ ಗೌರವಿಸಲಾಯಿತು. ಫೈಟರ್ ಸ್ಕ್ವಾಡ್ರನ್‌ನ ಕಮಾಂಡಿಂಗ್ ಆಫೀಸರ್ ಆಗಿ, ಇವರು ಮಿರಾಜ್-2000 ವಿಮಾನಗಳ ಆಧುನೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಫ್ರಾನ್ಸ್‌ನಿಂದ ಭಾರತಕ್ಕೆ 10 ಹೊಸ ಮಿರಾಜ್-2000 ವಿಮಾನಗಳನ್ನು ತರುವ ಪ್ರಕ್ರಿಯೆಯಲ್ಲಿಯೂ ಇವರು ಪ್ರಮುಖ ಪಾತ್ರ ವಹಿಸಿದ್ದರು.

ವಿಶಿಷ್ಟ ಸೇವಾ ಪದಕ’:

2011ರಲ್ಲಿ ಇವರಿಗೆ ‘ವಿಶಿಷ್ಟ ಸೇವಾ ಪದಕ’ ಒಲಿದುಬಂದಿತು. ಇವರು ಅರ್ಹತಾ ವಿಮಾನ ತರಬೇತುದಾರ ಮತ್ತು ಪರೀಕ್ಷಾ ಪೈಲಟ್ ಆಗಿ 20ಕ್ಕೂ ಹೆಚ್ಚು ಮಾದರಿಯ ವಿಮಾನಗಳಲ್ಲಿ 3,200 ಗಂಟೆಗಳ ಕಾಲ ಹಾರಾಟ ನಡೆಸಿದ ಅನುಭವ ಹೊಂದಿದ್ದಾರೆ. ಜಾಗ್ವಾರ್ ಮತ್ತು ಮಿಗ್-27 ವಿಮಾನಗಳ ಸ್ವದೇಶಿ ಆಧುನೀಕರಣ ಯೋಜನೆಗಳು ಹಾಗೂ ಎಮ್.ಎಮ್.ಆರ್.ಸಿ.ಎ ಕಾರ್ಯಕ್ರಮದ ಅಡಿಯಲ್ಲಿ ವಿಮಾನಗಳ ತಾಂತ್ರಿಕ ಮೌಲ್ಯಮಾಪನ ಮತ್ತು ಫೀಲ್ಡ್ ಟ್ರಯಲ್ಸ್‌ನಲ್ಲೂ ಇವರು ಕಾರ್ಯನಿರ್ವಹಿಸಿದ್ದಾರೆ. ಇವರ ಗಣನೀಯ ಸೇವೆಯನ್ನು ಗುರುತಿಸಿ 2023 ರಲ್ಲಿ ‘ಅತಿ ವಿಶಿಷ್ಟ ಸೇವಾ ಪದಕ’ ನೀಡಿ ಗೌರವಿಸಲಾಯಿತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8419 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment