ಗುಜರಾತ್ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯಲ್ಲಿ ಎಲ್ಲಾ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಶುಕ್ರವಾರ ಮಧ್ಯಾಹ್ನ ಸಂಪುಟ ವಿಸ್ತರಣೆ ನಡೆಯಲಿದೆ.
ಗುರುವಾರ ಮುಖ್ಯಮಂತ್ರಿ ಭೂಪೇಂದ್ರ ಹೊರತುಪಡಿಸಿ ಎಲ್ಲಾ ಸಚಿವ ಸಂಪುಟದ ಸದಸ್ಯರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಾಳೆ ನಡೆಯಲಿರುವ ಸಂಪುಟ ವಿಸ್ತರಣೆಯಲ್ಲಿ 26 ಸಚಿವರು ಸ್ಥಾನ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತ ಭೂಪೇಂದ್ರ ಪಾಟೀಲ್ ಎಲ್ಲಾ ಸಚಿವರಿಂದ ರಾಜೀನಾಮೆ ಪತ್ರ ಪಡೆದಿದ್ದಾರೆ. ಇದೀಗ ನಾಳೆ ನಡೆಯಲಿರುವ ಸಂಪುಟ ವಿಸ್ತರಣೆಯಲ್ಲಿ ೨೬ ಮಂದಿಗೆ ಸ್ಥಾನ ದೊರೆಯಲಿದ್ದು, ಇದರಲ್ಲಿ 8ರಿಂದ 10 ಸಚಿವರು ಮುಂದುವರಿಯಲಿದ್ದಾರೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಪಕ್ಷದ ಬಲವರ್ಧನೆಗಾಗಿ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಹೇಳಲಾಗಿದೆ. ಗುರುವಾರ ರಾತ್ರಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರನ್ನು ಭೇಟಿ ಮಾಡಲಿದ್ದು, ಸಚಿವರ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ. ಶುಕ್ರವಾರ ಮಧ್ಯಾಹ್ನ 11.30ಕ್ಕೆ ಸಂಪುಟ ವಿಸ್ತರಣೆಗೆ ಸಮಯ ನಿಗದಿಪಡಿಸಬಹುದು ಎಂದು ಹೇಳಲಾಗಿದೆ.
ಈ ಬಾರಿಯ ಸಚಿವ ಸಂಪುಟ ವಿಸ್ತರಣೆ ವೇಳೆ ಯುವ ಸಮುದಾಯ ಹಾಗೂ ಹಿರಿಯರಿಗೆ ಮಣೆ ಹಾಕುವ ಜೊತೆಗೆ ಜಾತಿ ಸಮತೋಲನ ಕಾಯ್ದುಕೊಳ್ಳುವ ಮೂಲಕ ಮುಂದಿನ ಚುನಾವಣೆಗೆ ತಂತ್ರಗಾರಿಕೆ ಆರಂಭಿಸಲಾಗಿದೆ ಎಂದು ಉನ್ನತ ಮೂಲಗಳು ವಿಶ್ಲೇಷಿಸಿವೆ.


