Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ಏ.22ರ ಪೆಹಲ್ಗಾಮ್ ದಾಳಿಗೆ 22 ನಿಮಿಷದಲ್ಲಿ ಪ್ರತ್ಯುತ್ತರ ನೀಡಲಾಗಿದೆ: ಪ್ರಧಾನಿ ಮೋದಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 20 ವೀಕ್ಷಣೆಗಳು
pm modi

ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳು ಧ್ವಂಸಗೊಂಡಿದ್ದು, ಪಾಕಿಸ್ತಾನದ ಹಲವು ವಾಯುನೆಲೆಗಳು ಈಗಲೂ ಐಸಿಯುನಲ್ಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕುರಿತು ಮಂಗಳವಾರ ಲೋಸಕಭೆಯಲ್ಲಿ ಸುದೀರ್ಘ ಭಾಷಣ ಮಾಡಿದ ಅವರು, ಪೆಹಲ್ಗಾಮ್ ದಾಳಿಗೆ ಊಹೆಗೂ ನಿಲುಕದ ಪ್ರತ್ಯುತ್ತರ ನೀಡುತ್ತೇವೆ ಎಂದು ಮೊದಲೇ ಹೇಳಿಕೆ ನೀಡಿದ್ದೆ. ಅದರಂತೆ ಭಾರತೀಯ ಸೇನೆ ಯಶಸ್ವಿ ದಾಳಿ ನಡೆಸಿದೆ ಎಂದರು.

ಪೆಹಲ್ಗಾಮ್ ದಾಳಿ ನಡೆಸಿದ ಉಗ್ರರು ಧಂಗೆ, ಗಲಭೆ ನಡೆಸುವ ಕುತಂತ್ರ ಹೊಂದಿದ್ದವು. ಈ ಸಂಚನ್ನು ಭಾರತ ವಿಫಲಗೊಳಿಸಿದೆ. ಅಲ್ಲದೇ ಪೆಹಲ್ಗಾಮ್ ದಾಳಿ ನಡೆಸಿದ ಉಗ್ರರನ್ನು ಕೂಡ ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ಅವರು ಹೇಳಿದರು.

ಪಾಕಿಸ್ತಾನದ ಉಗ್ರರ ತಾಣಗಳನ್ನು ನುಚ್ಚುನೂರು ಮಾಡಿದೆವು. ದಾಳಿಯಲ್ಲಿ ಭಾರತದ ತಾಂತ್ರಿಕ ನೈಪುಣ್ಯತೆ ಕೂಡ ಜಗತ್ತು ನೋಡಿತು. ಮೇಡ್ ಇನ್ ಇಂಡಿಯಾದ ಡ್ರೋಣ್ ಹಾಗೂ ಕ್ಷಿಪಣಿಗಳು ಪಾಕಿಸ್ತಾನದ ನಿದ್ದೆಗೆಡಿಸಿದವು ಎಂದು ಅವರು ಸಮರ್ಥಿಸಿಕೊಂಡರು.

ಪೆಹಲ್ಗಾಮ್ ದಾಳಿ ನಡೆದಾಗ ನಾನು ವಿದೇಶೀ ಪ್ರವಾಸದಲ್ಲಿದ್ದೆ. ಅಲ್ಲಿಂದ ಮರಳಿದ ಕೂಡಲೇ ಸಭೆ ನಡೆಸಿ ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಲು ನಿರ್ಧರಿಸಿದೆವು. ದಾಳಿ ಸಂಪೂರ್ಣ ಜವಾಬ್ದಾರಿ ಸೇನೆಗೆ ನೀಡಲಾಗಿದ್ದು, ಯಾವಾಗ? ಎಲ್ಲಿ? ಹೇಗೆ ದಾಳಿ ನಡೆಸಬೇಕು ಎಂಬ ನಿರ್ಣಾಯ ಕೈಗೊಳ್ಳುವ ಸ್ವಾತಂತ್ರ್ಯವನ್ನು ಸೇನೆಗೆ ನೀಡಲಾಯಿತು ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment