Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ಜಮ್ಮು ಕಾಶ್ಮೀರದಲ್ಲಿ ಹಿಮಪಾತ: ಉತ್ತರಾಖಂಡ್‌‌, ಬದರೀನಾಥ್ ನಲ್ಲಿ ಹೈಅಲರ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 28 ವೀಕ್ಷಣೆಗಳು

ಕಣಿವೆ ರಾಜ್ಯವಾದ ಜಮ್ಮ ಕಾಶ್ಮೀರದ ಸೋನಮಾರ್ಗ್‌ ನಲ್ಲಿ ಹಿಮಪಾತವಾಗಿದ್ದು, ಪ್ರವಾಸಿಗರ ರೆಸಾರ್ಟ್‌ ಹಾಗೂ ಮನೆಗಳು ಹಿಮದಿಂದ ಆವರಿಸಿದೆ.

ಕಳೆದ ಕೆಲವು ದಿನಗಳಿಂದ ಜಮ್ಮು ಕಾಶ್ಮೀರದಲ್ಲಿ ಇಬ್ಬನಿ ಬೀಳಲು ಆರಂಭಿಸಿದ್ದು, ಪ್ರಮುಖ ಪ್ರವಾಸಿತಾಣವಾದ ಸೋನಾಮಾರ್ಗ್ ಪ್ರವಾಸಿಗರ ರೆಸಾರ್ಟ್​ ಮೇಲೆ ಹಿಮಪಾತವಾಗಿದ್ದು, ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಂಗಳವಾರ ರಾತ್ರಿ 10.12ಕ್ಕೆ ಹಿಮಪಾತವಾಗಿದ್ದು, ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯ ಕಾಶ್ಮೀರದ ಗಂಡೇರ್ಬಲ್ ಜಿಲ್ಲೆಯ ಸೋನಾಮಾರ್ಗ್ ರೆಸಾರ್ಟ್‌ನ ಮೇಲೆ ಪ್ರವಾಹದ ರೀತಿಯಲ್ಲಿ ಹಿಮದ ರಾಶಿ ಹರಿದು ಬಂದಿದ್ದು, ರೆಸಾರ್ಟ್​ ಸಂಪೂರ್ಣವಾಗಿ ಹಿಮಪಾತದಿಂದ ಮುಚ್ಚಿ ಹೋಗಿದೆ. ರೆಸಾರ್ಟ್​ ಮತ್ತು ಸುತ್ತಮುತ್ತಲಿನ ಕಟ್ಟಡಗಳು ಹಿಮದಿಂದ ಆವೃತವಾಗಿದೆ. ಈ ಬೃಹತ್ ಹಿಮಪಾತವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಕಟ್ಟಡಗಳನ್ನು ಹಿಮ ಆವರಿಸಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯಾವುದೇ ಜೀವಹಾನಿ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಹೆಚ್ಚಿನ ತೀವ್ರತೆಯ ಅಥವಾ ಹೆಚ್ಚಿನ ಅಪಾಯಕಾರಿ ಹಿಮಪಾತ ಸಂಭವಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಸೋನಾಮಾರ್ಗ್ ಮತ್ತು ಕಣಿವೆಯ ಇತರ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಮಧ್ಯಮದಿಂದ ಭಾರಿ ಹಿಮ ಬೀಳುತ್ತಿದೆ.

ಉತ್ತರಾಖಂಡ್‌, ಬದರೀನಾಥ್‌ ನಲ್ಲಿ ಹೈಲರ್ಟ್

ಜಮ್ಮು ಕಾಶ್ಮೀರದಲ್ಲಿ ಹಿಮಪಾತದ ಬೆನ್ನಲ್ಲೆ ಉತ್ತರಾಖಂಡ್‌ ನಲ್ಲಿ ಚಳಿಯ ತೀವ್ರತೆ ಹೆಚ್ಚಿದ್ದು, ಬದರಿನಾಥ್ ಮತ್ತು ಕೇದಾರನಾಥ ಸೇರಿದಂತೆ ಉತ್ತರಾಖಂಡದ ಹಲವಾರು ಎತ್ತರದ ಪ್ರದೇಶಗಳಿಗೆ ಹಿಮಪಾತವಾಗುವ ಸಾಧ್ಯತೆ ಕುರಿತು ಎಚ್ಚರಿಕೆ ನೀಡಲಾಗಿದೆ.

ವಾರದೊಳಗೆ ರಾಜ್ಯದಲ್ಲಿ ಇದು ಎರಡನೇ ಹಿಮಪಾತವಾಗಿದೆ. ಇದಕ್ಕೂ ಮೊದಲು, ಜನವರಿ 23 ರಂದು ಸಂಭವಿಸಿದ್ದ ಭಾರಿ ಹಿಮಪಾತವು ಎತ್ತರದ ಪ್ರದೇಶಗಳನ್ನು ಆವರಿಸಿತ್ತು. ಹಿಮಪಾತ ಮತ್ತು ಎತ್ತರದ ಪ್ರದೇಶಗಳಲ್ಲಿ ಹಿಮಪಾತದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಉತ್ತರಾಖಂಡ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಎಲ್ಲಾ ಜಿಲ್ಲೆಗಳಿಗೆ ಎಚ್ಚರಿಕೆ ರವಾನಿಸಿದೆ.

ಈ ಕುರಿತು ಚಂಡೀಗಢ ಮೂಲದ ಡಿಫೆನ್ಸ್ ಜಿಯೋ-ಇನ್ಫರ್ಮ್ಯಾಟಿಕ್ಸ್ ರಿಸರ್ಚ್ ಎಸ್ಟಾಬ್ಲಿಷ್‌ಮೆಂಟ್ (ಡಿಜಿಆರ್‌ಇ) ಸೂಚನೆ ಹೊರಡಿಸಿದೆ. ಇಂದು (ಜನವರಿ 28) ಸಂಜೆ 5ಗಂಟೆಯವರೆಗೆ ವಿವಿಧ ಎತ್ತರದ ಪ್ರದೇಶಗಳಲ್ಲಿ ಹಿಮಪಾತ ಮತ್ತು ಹಿಮಾವೃತವಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಕಳೆದೆರಡು ದಿನಗಳ ಹಿಂದೆ ಚಮೋಲಿ ಜಿಲ್ಲೆಯ ಬದರಿನಾಥ್ ಮತ್ತು ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ, ಸುತ್ತಮುತ್ತಲಿನ ಶಿಖರಗಳು ಮತ್ತು ಉತ್ತರಕಾಶಿ ಜಿಲ್ಲೆಯ ಎತ್ತರದ ಪ್ರದೇಶಗಳಲ್ಲಿ ಸೋಮವಾರ ರಾತ್ರಿಯಿಂದ ಹಿಮಪಾತದ ವರದಿಯಾಗುತ್ತಿದೆ. ಉತ್ತರಕಾಶಿ, ಚಮೋಲಿ ಮತ್ತು ರುದ್ರಪ್ರಯಾಗದಲ್ಲಿ ಅರೆಂಜ್​ ಅಲರ್ಟ್​ ಘೋಷಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment