Thursday, December 25, 2025
Google search engine
Homeದೇಶನಿಷೇಧ ಪ್ರಯತ್ನ ಪದೇಪದೆ ವಿಫಲ: ಆರ್ ಎಸ್ ಎಸ್

ನಿಷೇಧ ಪ್ರಯತ್ನ ಪದೇಪದೆ ವಿಫಲ: ಆರ್ ಎಸ್ ಎಸ್

ನವದೆಹಲಿ: ಕಾಂಗ್ರೆಸ್ ಸರ್ಕಾರಗಳ ಆಡಳಿತದ ಅವಧಿಯಲ್ಲಿ ಮೂರು ಬಾರಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಿಷೇಧದ ಪ್ರಯತ್ನಗಳು ನಡೆದಿದ್ದು, ಪ್ರತಿ ಬಾರಿಯೂ ಸಾರ್ವಜನಿಕ ಬೆಂಬಲ ಮತ್ತು ನ್ಯಾಯಾಂಗ ಪರಿಶೀಲನೆಯ ಬಳಿಕ ಪ್ರಯತ್ನ ವಿಫಲವಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ.

ಆರ್‌ಎಸ್‌ಎಸ್ ನಿಷೇಧಿಸುವ ವಿಪಕ್ಷಗಳ ಒತ್ತಾಯವು ರಾಜಕೀಯ ಸ್ವರೂಪವನ್ನು ಪಡೆಯುತ್ತಿರುವ ಬೆನ್ನಲ್ಲೇ ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೊದಲ ಅಧಿಕೃತ ಪ್ರತಿಕ್ರಿಯೆ ನೀಡಿ ಆರ್​ಎಸ್​ಎಸ್​ ಅನ್ನು ಕಾನೂನುಬಾಹಿರಗೊಳಿಸುವ ಪ್ರಯತ್ನಗಳು ಹೊಸದಲ್ಲ, ಈ ಹಿಂದೆ ಪದೇ ಪದೇ ಈ ಪ್ರಯತ್ನ ವಿಫಲವಾಗಿದೆ ಎಂದಿದ್ದಾರೆ.

ಆರ್​ಎಸ್​ಎಸ್​ ಮೇಲೆ ನಿಷೇಧ ಏಕೆ? ಎಂಬ ಕಾರಣವನ್ನು ನೀಡಿ. ಅದು ಕೇವಲ ಒಬ್ಬರ ಆಶಯವಾಗಿರಬಹುದಲ್ಲವೇ? ನಿಜವಾದ ಕಾರಣವೇನು? ಆರ್​ಎಸ್​ಎಸ್​ ರಾಷ್ಟ್ರ ನಿರ್ಮಾಣ ಮತ್ತು ಸಮಾಜವನ್ನು ಬಲಪಡಿಸುವ ಪ್ರಯತ್ನಗಳ ಮೂಲಕ ನಿರಂತರವಾಗಿ ಕೊಡುಗೆ ನೀಡಿದೆ” ಎಂದು ಹೊಸಬಾಳೆ ಹೇಳಿದರು.

ಧಾರ್ಮಿಕ ಮತಾಂತರದ ಕುರಿತು ಪ್ರತಿಕ್ರಿಯಿಸಿದ ದತ್ತಾತ್ರೇಯ ಹೊಸಬಾಳೆ, “ಸಂತರು ಮತ್ತು ಋಷಿಗಳು ಸೇರಿದಂತೆ ಸಮಾಜದ ಅನೇಕ ಸದಸ್ಯರು ಮತ್ತು ವಿಶ್ವ ಹಿಂದೂ ಪರಿಷತ್ ದೇಶದಲ್ಲಿ ಧಾರ್ಮಿಕ ಮತಾಂತರವನ್ನು ತಡೆಯಲು ಅವಿಶ್ರಾಂತವಾಗಿ ಶ್ರಮಿಸುತ್ತಿದ್ದಾರೆ. ನಾವು ಅವರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತೇವೆ ಎಂದರು.

ಸಿಖ್ ಸಮುದಾಯದೊಳಗೆ ಧಾರ್ಮಿಕ ಮತಾಂತರದ ಪ್ರವೃತ್ತಿ ಹೆಚ್ಚಾಗಿದೆ. ಪಂಜಾಬ್‌ನಲ್ಲಿ ಈ ವಿಷಯದ ಬಗ್ಗೆ ಜಾಗೃತಿ ಇದೆ, ಆದರೆ ಅದನ್ನು ಬಲಪಡಿಸುವ ಅಗತ್ಯವಿದೆ. ಮತಾಂತರಗೊಂಡವರನ್ನು ಮರಳಿ ಕರೆತರಲು ಪ್ರಯತ್ನಗಳನ್ನು ಮಾಡಬೇಕು ಎಂಬ ಚರ್ಚೆ ಅಲ್ಲಿನ ಜನರಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು.

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಆರ್‌ಎಸ್‌ಎಸ್ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಮೇಲೆ ನಿಷೇಧ ಹೇರಬೇಕೆಂದು ಒತ್ತಾಯಿಸಿದ ಒಂದು ದಿನದ ನಂತರ ದತ್ತಾತ್ರೇಯ ಹೊಸಬಾಳೆ ಅವರ ಈ ಹೇಳಿಕೆಗಳು ಬಂದಿವೆ. ಭಾರತದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಚೌಕಟ್ಟನ್ನು ರಕ್ಷಿಸಲು ಸರ್ದಾರ್ ವಲ್ಲಭಭಾಯಿ ಪಟೇಲ್ ಒಮ್ಮೆ ಇದೇ ರೀತಿಯ ನಿರ್ಬಂಧಗಳನ್ನು ವಿಧಿಸಿದ್ದರು ಎಂದು ಖರ್ಗೆ ಹೇಳಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments