ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಕಾಲ್ತುಳಿತ ಪ್ರಕರಣದಲ್ಲಿ ನಾಂಪಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಚಿತ್ರದ ಬಿಡುಗಡೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮಹಿಳೆ ಮೃತಪಟ್ಟು, ಬಾಲಕ ಅಸ್ವಸ್ಥಗೊಂಡಿದ್ದ.
ಕಾಲ್ತುಳಿತ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದ ನಾಂಪಲ್ಲಿ ಸೆಷನ್ಸ್ ನ್ಯಾಯಾಲಯ ಅಲ್ಲು ಅರ್ಜುನ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
1 ಲಕ್ಷ ರೂ. ಭದ್ರತಾ ಠೇವಣಿ ಹಾಗೂ ಇಬ್ಬರು ಶ್ಯೂರಿಟಿ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದ್ದು, ಪೊಲೀಸರ ತನಿಖೆಗೆ ಸಹಕರಿಸುವಂತೆ ಸೂಚಿಸಲಾಗಿದೆ.