ಖ್ಯಾತ ಉದ್ಯಮಿ ಹಾಗೂ ಬಿಜೆಪಿ ಮುಖಂಡ ಗೋಪಾಲ್ ಖೆಮ್ಕಾ ಅವರ ಹತ್ಯೆ ಒಂದು ವಾರದ ನಂತರ ಬಿಹಾರದಲ್ಲಿ ದುಷ್ಕರ್ಮಿಗಳು ಮತ್ತೊಬ್ಬ ಬಿಜೆಪಿ ಮುಖಂಡನನ್ನು ಹತ್ಯೆ ಮಾಡಿದ್ದಾರೆ.
ಶೈಕಾಪುರದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ೫೩ ವರ್ಷದ ಸುರೇಂದ್ರ ಖೇವತ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಸುರೇಂದ್ರ ಖೇವತ್ ಅವರಿಗೆ ನಾಲ್ಕು ಗುಂಡುಗಳು ತಗುಲಿದ್ದು, ಕೂಡಲೇ ಅವರನ್ನು ಪಾಟ್ನಾದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡುವ ಹಂತದಲ್ಲೇ ಮೃತಪಟ್ಟಿದ್ದಾರೆ.
ಶಾಸಕ ಗೋಪಾಲ್ ರವಿದಾಸ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ನಂತರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ದುಷ್ಕರ್ಮಿಗಳ ಪತ್ತೆ ಶೋಧ ಕಾರ್ಯ ನಡೆಸಿದ್ದಾರೆ.
ಸುರೇಂದ್ರ ಖಾವತ್ ಕಿಸಾನ್ ಮೋರ್ಚಾ ಮುಖಂಡರಾಗಿ ಕಾರ್ಯ ನಿರ್ವಹಿಸಿದ್ದರು. ಇತ್ತೀಚೆಗೆ ಗೋಪಾಲ್ ಖೇಮ್ಕಾ ಹತ್ಯೆ ನಂತರ ಈ ಘಟನೆ ನಡೆದಿರುವುದು ಬಿಜೆಪಿ ಪಾಳಯದಲ್ಲಿ ಆತಂಕ ಸೃಷ್ಟಿಸಿದೆ.


