Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ದೆಹಲಿ ಚುನಾವಣೆ ಬಿಜೆಪಿ ಪಟ್ಟಿ ಪ್ರಕಟ: ಕೇಜ್ರಿವಾಲ್​ ವಿರುದ್ಧ ಪರವೇಶ್ ಕಣಕ್ಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 33 ವೀಕ್ಷಣೆಗಳು

ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕ ಪ್ರಕಟಿಸುವ ಮುನ್ನವೇ ಆಡಳಿತಾರೂಢ ಎಎಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಬಿಜೆಪಿ ಕೂಡ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಅಚ್ಚರಿ ಮೂಡಿಸಿದೆ.

ಪ್ರಧಾನಿ ಮೋದಿ ಶುಕ್ರವಾರ ದೆಹಲಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದಂತೆ ಚುನಾವಣಾ ಪ್ರಚಾರಕ್ಕೆ ಕಾವು ಉಂಟಾಗಿದ್ದು, ರಾಜಧಾನಿಯಲ್ಲಿ ಅಧಿಕಾರ ಹಿಡಿಯಲು ಜಿದ್ದಿಗೆ ಬಿದ್ದಿರುವ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಮುಂಚಿತವಾಗಿಯೇ ಪ್ರಕಟಿಸಿವೆ.

ಆಮ್ ಆದ್ಮಿ ಪಕ್ಷದ ಮುಖ್ಯ ಸಂಚಾಲಕ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅವರಿಂದ್ ಕೇಜ್ರಿವಾಲ್ ವಿರುದ್ಧ ಮಾಜಿ ಸಂಸದ ಪರವೇಶ್ ವರ್ಮಾ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.

ಮುಖ್ಯಮಂತ್ರಿ ಅತಿಶಿ ವಿರುದ್ಧ ಕಲ್ಕಜಿ ಕ್ಷೇತ್ರದಿಂದ ಮಾಜಿ ಸಂಸದ ರಮೇಶ್​ ಬಿಂಧುರಿಯನ್ನು, ಕರೊಲ್​ ಭಾಗ್​ ಕ್ಷೇತ್ರದಿಂದ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳಾದ ದುಶ್ಯಂತ್ ಕುಮಾರ್ ಗೌತಮ್, ಜನಕಪುರಿಯಿಂದ ಅಶೀಶ್​ ಸೂದ್​ ಮತ್ತು ಗಾಂಧಿನಗರ್​​ನಿಂದ ಅರವಿಂದ್​ ಸಿಂಗ್​ ಲವ್ಲಿಯನ್ನು ಅಖಾಡಕ್ಕೆ ಇಳಿಸಿದೆ.

29 ಸ್ಪರ್ಧಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಜೆಪಿ, ಎಎಪಿ ತೊರೆದು ಇತ್ತೀಚಿಗೆ ಕಮಲ ಪಾಳೆಯ ಸೇರಿದ್ದ ಕೈಲಾಶ್​ ಗೆಹ್ಲೋಟ್​ ಅವರನ್ನು ಬ್ರಿಜ್ವಸನ್​ನಿಂದ ಕಣಕ್ಕೆ ಇಳಿಸಿದೆ.

ಇಬ್ಬರು ಮಹಿಳೆಯರಿಗೆ ಅವಕಾಶ:

ಪಟ್ಟಿಯಲ್ಲಿ ಇಬ್ಬರು ಮಹಿಳೆಯರಿಗೂ ಟಿಕೆಟ್​ ನೀಡಲಾಗಿದೆ. ದೆಹಲಿ ಬಿಜೆಪಿ ಮಾಜಿ ಅಧ್ಯಕ್ಷರಾದ ಸತೀಶ್​ ಉಪಾಧ್ಯಾಯ ಮಲ್ವಿಯಾ ನಗರ್​ನಿಂದ, ರಾಜ್​ಕುಮಾರ್​ ಭಾಟಿಯಾ ಆದರ್ಶನ ನಗರ್​ನಿಂದ ಬಡ್ಲಿ ಯಿಂದ ದೀಪಕ್​ ಚೌಧರಿ ಮತ್ತು ರೈಥಲದಿಂದ ಕುಲ್ವಂತ್​ ರಾಣಾ ಕಣಕ್ಕೆ ಇಳಿಯಲಿದ್ದಾರೆ.

ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆಸಿರುವ ಆಮ್​ ಆದ್ಮಿ ಪಕ್ಷ (ಎಎಪಿ) ಎಲ್ಲ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇನ್ನು ಕಾಂಗ್ರೆಸ್​ ಕೂಡ ಕೆಲವು ನಾಯಕರ ಹೆಸರನ್ನು ಕೂಡ ಪ್ರಕಟಿಸಿದೆ.

ಇದೇ ಫೆಬ್ರವರಿಯಲ್ಲಿ ದೆಹಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಮೂರು ಪ್ರಮುಖ ರಾಷ್ಟ್ರೀಯ ಪಕ್ಷಗಳು ಚುನಾವಣೆ ಎದುರಿಸಲು ಸಿದ್ಧತೆ ನಡೆಸಿವೆ. ಚುನಾವಣಾ ದಿನಾಂಕ ಸೇರಿದಂತೆ ಪ್ರಕ್ರಿಯೆ ಕುರಿತು ಚುನಾವಣಾ ಆಯೋಗದಿಂದ ಅಧಿಕೃತ ಮಾಹಿತಿ ಹೊರ ಬೀಳಬೇಕಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment