Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ಗಂಡು ಮಗುವಿಗೆ ಹೆಣ್ಣಿನ ವೇಷ ಹಾಕಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 28 ವೀಕ್ಷಣೆಗಳು
child dress as girl

ಗಂಡು ಮಗುವಿಗೆ ಹೆಣ್ಣಿನಂತೆ ಶೃಂಗಾರ ಮಾಡಿ ತಾಯಿಯ ಬಂಗಾರವೆಲ್ಲಾ ತೊಡಿಸಿ, ಕಣ್ಣಿಗೆ ಕಾಡಿಗೆ ಹಚ್ಚಿ, ತಲೆಯ ಮೇಲೆ ದುಪ್ಪಟ್ಟ ಹೊದಿಸಿ ಸಂಭ್ರಮಿಸಿದ ನಂತರ ಒಂದೇ ಕುಟುಂಬದ ನಾಲ್ವರು ವಾಟರ್ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ.

ಬಾರ್ಮರ್ ನಗರದ ಶಿವಲಾಲ್ ಮೇಘವಾಲ್ (35), ಪತ್ನಿ ಕವಿತಾ (32), ಮಕ್ಕಳಾದ ಭಜರಂಗ್ (9) ಮತ್ತು ರಾಮ್ ದೇವ್ (8) ಮನೆಯಲ್ಲಿನ ವಾಟರ್ ಟ್ಯಾಂಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಣ್ಣಿನ ವೇಷ ಹಾಕಿ ಸಂಭ್ರಮಸಿದಿದ ಕೊನೆಯ ಮಗ ರಾಮ್ ದೇವ್ ಕೂಡ ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದಾಗ ನಾಲ್ವರು ಮೃತಪಟ್ಟಿದ್ದು, ಮನೆಯಿಂದ 20 ಮೀಟರ್ ದೂರದಲ್ಲಿರುವ ವಾಟರ್ ಟ್ಯಾಂಕ್ ನಲ್ಲಿ ಶವಗಳನ್ನು ಪತ್ತೆಹಚ್ಚಿದ್ದು, ಮಕ್ಕಳನ್ನು ಕೊಂದು ಹೆತ್ತವರು ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದ್ದು, ಸಂಜೆ ನೀರು ಬ್ಲಾಕ್ ಆಗಿದ್ದರಿಂದ ಸಂಬಂಧಿಕರು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ಬುಧವಾರ ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ತನ್ನನ್ನು ಸೇರಿ ಮೂವರ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿದ್ದು, ಮನೆಯ ಒಡೆತನ ವಿಷಯದಲ್ಲಿ ಶಿವಲಾಲ್ ಮತ್ತು ಸೋದರರ ನಡುವೆ ಮನಸ್ತಾಪ ಇತ್ತು.

ಶಿವಲಾಲ್ ಕೇಂದ್ರ ಸರ್ಕಾರದ ಪ್ರಧಾನಿ ಇಂದಿರಾ ಆವಾಸ್ ಯೋಜನೆಯಡಿ ಮನೆ ನಿರ್ಮಿಸಲು ಮುಂದಾಗಿದ್ದು, ಇದು ಸೋದರರ ಅಸಮಾಧಾನಕ್ಕೆ ಕಾರಣವಾಗಿದ್ದು, ಮನೆ ಕಟ್ಟಲು ಬಿಟ್ಟಿರಲಿಲ್ಲ. ಇದರಿಂದ ಅಸಮಾಧಾನಗೊಂಡಿದ್ದ ಶಿವಲಾಲ್ ಕುಟುಂಬದ ಸಮೇತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment