Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ಬಿಎಸ್ಸೆನ್ನೆಲ್ ಗ್ರಾಹಕರಿಗೆ ಬಂಪರ್ ಆಫರ್: 1 ರೂ.ಗೆ ಒಂದು ತಿಂಗಳು 4ಜಿ ಉಚಿತ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 24 ವೀಕ್ಷಣೆಗಳು
bsnl
bsnl

ಬಿಎಸ್ಸೆನ್ನೆಲ್‌ ದೀಪಾವಳಿ ಪ್ರಯುಕ್ತ ಹೊಸ ಗ್ರಾಹಕರಿಗೆ ವಿಶೇಷವಾದ  ಆಫರ್‌ ಪ್ರಕಟಿಸಿದೆ. 1 ರೂ. ಟೋಕನ್ ಮೊತ್ತಕ್ಕೆ ಒಂದು ತಿಂಗಳ 4G ಫ್ರೀ ಮೊಬೈಲ್ ಸೇವೆ ನೀಡುತ್ತಿದೆ.

ಈ ಆಫರ್ ಅಕ್ಟೋಬರ್ 15ರಿಂದ ನವೆಂಬರ್ 15ರವರೆಗೆ ಇರುತ್ತದೆ. ಈ ಅವಧಿಯಲ್ಲಿ ಹೊಸ ಗ್ರಾಹಕರು ಬಿಎಸ್‌ಎನ್‌ಎಲ್‌ನ ಯಾವುದೇ ಶಾಖೆಗೆ ಭೇಟಿ ನೀಡಿ ಅಥವಾ ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.

ಈ ವಿಶೇಷ ಆಫರ್‌ನಲ್ಲಿ ಪ್ರತಿದಿನ ಅನಿಯಮಿತ ಧ್ವನಿ ಕರೆಗಳು, ದಿನಕ್ಕೆ 2GB ಹೈ-ಸ್ಪೀಡ್ ಡೇಟಾ, ದಿನಕ್ಕೆ 100 SMS, ಉಚಿತ ಸಿಮ್ ಕಾರ್ಡ್ ಸಿಗುತ್ತಿದ್ದು, KYC ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. 1 ರೂ. ಪಾವತಿ ಟೋಕನ್ ಮೊತ್ತವಾಗಿದ್ದು, ಗ್ರಾಹಕರ ದಾಖಲೆ ದೃಢೀಕರಣಕ್ಕಾಗಿ ಬಳಕೆಯಾಗುತ್ತದೆ.

ಬಿಎಸ್‌ಎನ್‌ಎಲ್‌ ಸೇವೆಗಳ ಗುಣಮಟ್ಟ ಮತ್ತು ನೆಟ್‌ವರ್ಕ್ ವ್ಯಾಪ್ತಿಯು ಉಚಿತ ಅವಧಿ ಮುಗಿದ ನಂತರವೂ ಗ್ರಾಹಕರನ್ನು ನಮ್ಮೊಂದಿಗೆ ಉಳಿಸಿಕೊಳ್ಳುತ್ತದೆ ಎಂಬ ವಿಶ್ವಾಸವಿದೆ. ಈ ದೀಪಾವಳಿ ಬೋನಸ್‌ ಗ್ರಾಹಕರಿಗೆ ನಮ್ಮ 4G ನೆಟ್‌ವರ್ಕ್‌ ಅನ್ನು ಉಚಿತವಾಗಿ ಅನುಭವಿಸುವ ಅವಕಾಶ ನೀಡುತ್ತದೆ ಎಂದು ಕಂಪೆನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎ. ರಾಬರ್ಟ್ ಜೆ. ರವಿ ಹೇಳುತ್ತಾರೆ.

ಬಿಎಸ್‌ಎನ್‌ಎಲ್ ತನ್ನ ಸೇವೆಗಳಲ್ಲಿ ತಂತ್ರಜ್ಞಾನ ನವೀಕರಿಸಿದೆ. ನಮ್ಮ ದೇಶೀಯ ಟೆಲಿಕಾಂ ಮೂಲಸೌಕರ್ಯವು ಖಾಸಗಿ ಕಂಪನಿಗಳಿಗಿಂತ ಕಡಿಮೆ ಅಲ್ಲ ಎಂದು ಹೇಳಿದ್ದಾರೆ.

ಆಗಸ್ಟ್ 2025ರಲ್ಲಿ ಬಿಎಸ್‌ಎನ್‌ಎಲ್ ನೀಡಿದ್ದ ಹಿಂದಿನ ವಿಶೇಷ ಪ್ಲ್ಯಾನ್ ಅಡಿ 1.38 ಲಕ್ಷಕ್ಕೂ ಹೆಚ್ಚು ಹೊಸ ಬಳಕೆದಾರರು ಸೇರಿಕೊಂಡಿದ್ದರು. ಬಿಎಸ್‌ಎನ್‌ಎಲ್ ಏರ್‌ಟೆಲ್‌ ಅನ್ನು ಹಿಂದಿಕ್ಕಿ ದೇಶದ ಎರಡನೇ ಅತಿದೊಡ್ಡ ಚಂದಾದಾರರ ನೆಟ್‌ವರ್ಕ್ ಆಗಿ ಹೊರಹೊಮ್ಮಿತ್ತು. ಈಗ ದೀಪಾವಳಿ ಹಬ್ಬದ ಸಮಯದಲ್ಲಿ ಇನ್ನಷ್ಟು ಗ್ರಾಹಕರನ್ನು ಸೆಳೆಯಲು ಈ ವಿಶೇಷ ಆಫರ್‌ ಅನ್ನು ಪ್ರಕಟಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment