Tuesday, 17 November 2026 — Kannadavahini
BREAKING NEWS
ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ
ದೇಶ

ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಆಗಿ ಅಜಿತ್ ಪತ್ನಿ ಸುನೇತ್ರಾ ಪ್ರಮಾಣವಚನ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 23 ವೀಕ್ಷಣೆಗಳು
sunetra pawar

ಮುಂಬೈ: ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಎನ್ ಸಿಪಿ ನಾಯಕ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ರಾಜ್ಯದ ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಈ ಮೂಲಕ ತಮ್ಮ ಪತಿಯ ಸ್ಥಾನವನ್ನು ಅವರು ತುಂಬಿರುವ ಸುನೇತ್ರಾ ಪವಾರ್ ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮಹಿಳೆಯೊಬ್ಬರು ಮುಖ್ಯಮಂತ್ರಿಯಾಗಲೀ, ಉಪಮುಖ್ಯಮಂತ್ರಿಯಾಗಲೀ ಆಗಿದ್ದಿಲ್ಲ. ಸುನೇತ್ರಾ ಅವರು ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ. ಸುನೇತ್ರಾ ಪವಾರ್ ಮೊದಲ ಬಾರಿ ಸಚಿವ ಸಂಪುಟ ಸೇರಿದರೂ ಮೂರು ಖಾತೆಗಳನ್ನು ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.

ತಮ್ಮ ಪತಿಯ ನೆರಳಿನಲ್ಲೇ ಬಹುತೇಕ ಜೀವನ ಸವೆಸಿದ ಸುನೇತ್ರಾ ಪವಾರ್ 61ನೇ ವಯಸ್ಸಿನಲ್ಲಿ ಸಕ್ರಿಯ ರಾಜಕಾರಣ ಪ್ರವೇಶ ಮಾಡಿದ್ದರು. ಪ್ರಬಲ ರಾಜಕೀಯ ವ್ಯಕ್ತಿಗಳಿರುವ ಕುಟುಂಬದಲ್ಲೇ ಹುಟ್ಟಿ ಬೆಳೆದರೂ ಕುಟುಂಬ ಪಾಲನೆಯಲ್ಲೇ ಹೆಚ್ಚಿನ ಸಮಯ ಕಳೆದಿದ್ದರು.

ಸಹೋದರ ಪದಂಸಿಂಗ್ ಬಾಜಿರಾವ್ ಪಾಟೀಲ್ ಅವರು ಮಾಜಿ ಸಚಿವರು, ಹಾಗೂ ಎನ್​ಸಿಪಿ ಪಕ್ಷದ ಆರಂಭಿಕರಲ್ಲಿ ಒಬ್ಬರು. ಶರದ್ ಪವಾರ್ ಅವರ ಆಪ್ತರೂ ಆಗಿದ್ದರು. ಪ್ರಬಲ ರಾಜಕೀಯ ಕುಟುಂಬದ ಹಿನ್ನೆಲೆಯಿದ್ದರೂ ಸುನೇತ್ರಾ ಸಕ್ರಿಯ ರಾಜಕಾರಣಕ್ಕೆ ಬರಲು 61ನೇ ವಯಸ್ಸು ದಾಟಬೇಕಾಯಿತು. ತಮ್ಮ ಪತಿ ಪ್ರತಿನಿಧಿಸುತ್ತಿದ್ದ ಬಾರಾಮತಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸುವುದರಲ್ಲೇ ಸುನೇತ್ರಾ ತೃಪ್ತಿಪಡುತ್ತಿದ್ದರು.

ಲೋಕಸಭಾ ಚುನಾವಣೆಯಲ್ಲಿ ಬಾರಾಮತಿ ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಬಂದಿದ್ದರಾದರೂ ಅವರ ನಿರ್ಧಾರ ಒಲ್ಲದ ಮನಸ್ಸಿನದ್ದಾಗಿತ್ತು. ಆ ಕ್ಷೇತ್ರದಲ್ಲಿ ಶರದ್ ಪವಾರ್ ಮಗಳಾದ ಸುಪ್ರಿಯಾ ಸುಳೆ ಎದುರು ಸ್ಪರ್ಧಿಸಿ ಸೋತರು. ನಂತರ ಅವರನ್ನು ರಾಜ್ಯಸಭಾ ಸ್ಥಾನಕ್ಕೆ ನಿಲ್ಲಿಸಿ ಗೆಲ್ಲಿಸಿ ಸಂಸತ್ತಿಗೆ ಕಳುಹಿಸಿಕೊಡಲಾಯಿತು. ಈ ಮೂಲಕ ಸುನೇತ್ರಾ ಪವಾರ್ ಅವರು ಸಂಸದರಾದರು.

ಸುನೇತ್ರಾ ಪವಾರ್ ಅವರನ್ನು ಎನ್​ಸಿಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ಉಪಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ಛಗನ್ ಭುಜಬಲ್, ಪ್ರಫುಲ್ ಪಟೇಲ್ ಮೊದಲಾದ ಅನುಭವಿ ರಾಜಕಾರಣಿಗಳಿರುವ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯೂ ಅವರ ಹೆಗಲಿಗಿದೆ. ಸಕ್ರಿಯ ಆಡಳಿತದಲ್ಲಿ ಅನುಭವ ಇಲ್ಲದಿದ್ದರೂ ಅದನ್ನು ನಿಭಾಯಿಸುವ ಅನಿವಾರ್ಯತೆ ಅವರಿಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8422 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment