ನವದೆಹಲಿ: ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರಾಗಿ ಮುಂದುವರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಪ್ರವೀಣ್ ಸೂದ್ ಅವರ ಸಿಬಿಐ ನಿರ್ದೇಶಕರಾಗಿ ಅಧಿಕಾರಾವಧಿಯನ್ನು 1 ವರ್ಷ ಮುಂದುವರಿಸಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
1986 ಐಪಿಎಸ್ ಬ್ಯಾಚ್ ನ ಕರ್ನಾಟಕ ಕ್ರೆಡ್ ಆಗಿರುವ ಪ್ರವೀಣ್ ಸೂದ್ ಅಧಿಕಾರವಧಿ ಮೇ 24ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಸಂಪುಟ ನೇಮಕಾತಿ ಸಮಿತಿ 1 ವರ್ಷ ವಿಸ್ತರಣೆ ಮಾಡಲು ತೀರ್ಮಾನಿಸಿತು.
ರಾಹುಲ್ ವಿರೋಧ
ಪ್ರವೀಣ್ ಸೂದ್ ಅವರ ಅಧಿಕಾರಾವಧಿ ಮುಂದುವರಿಕೆಗೆ ಕೇಂದ್ರ ಸರ್ಕಾರ ಒಲವು ವ್ಯಕ್ತಪಡಿಸಿದ್ದಕ್ಕೆ ಲೋಕಸಭಾ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪ್ರಧಾನಮಂತ್ರಿ ಕಚೇರಿಯಲ್ಲಿ ಕಳೆದ ಮೇ.5 ರಂದು ನಡೆದ ಸಭೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸುಪ್ರೀಂ ಕೋರ್ಟ್‌ನ ಸಿಜೆಐ ಸಂಜೀವ್ ಖನ್ನಾ ಭಾಗವಹಿಸಿದ್ದರು.
ಸಭೆಯಲ್ಲಿ ಅಂತಿಮವಾಗಿ ಯಾವ ನಿರ್ಧಾರ ತೆಗೆದುಕೊಳ್ಳಲಾಯಿತು ಎಂಬ ಬಗ್ಗೆ ನಿಖರ ಮಾಹಿತಿಗಳಿಲ್ಲ. ಆದರೆ, ಸೂದ್ ಅವರ ಅಧಿಕಾರಾವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸುವ ಸಂಬಂಧ ಪ್ರಸ್ತಾಪಗೊಂಡಿದೆ.
ಆದರೆ ಪ್ರವೀಣ್ ಸೂದ್ ಅವರ ಅಧಿಕಾರಾವಧಿಯನ್ನು ಒಂದು ವರ್ಷ ಮುಂದುವರೆಸುವ ಬಗ್ಗೆ ರಾಹುಲ್ ಗಾಂಧಿ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಪ್ರವೀಣ್ ಸೂದ್ ಅವರ ಎರಡು ವರ್ಷದ ಅಧಿಕಾರಾವಧಿಯು ಇದೇ ಮೇ 25ಕ್ಕೆ ಮುಕ್ತಾಯವಾಗಲಿದ್ದು ಅವರಿಗೆ ಈಗ 61 ವರ್ಷ ವಯಸ್ಸಾಗಿದೆ