Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ಸಿಬಿಐ ಮೇಜರ್ ಆಪರೇಷನ್: 16 ರಾಜ್ಯಗಳ 80 ಸೈಬರ್ ವಂಚಕರ ತಾಣಗಳ ಮೇಲೆ ದಾಳಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 28 ವೀಕ್ಷಣೆಗಳು
cyber crime

ನವದೆಹಲಿ: ಡಿಜಿಟಲ್ ಅರೆಸ್ಟ್ ಮೂಲಕ ದೇಶದಾದ್ಯಂತ 200ಕ್ಕೂ ಹೆಚ್ಚು ಜನರನ್ನು ವಂಚಿಸಿದ್ದ ಸೈಬರ್ ವಂಚಕರ ತಾಣಗಳ ಮೇಲೆ ಸಿಬಿಐ ಗುರುವಾರ ಬೃಹತ್ ಕಾರ್ಯಾಚರಣೆ ನಡೆಸಿದೆ.

ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್ ಅನ್ನೇ ಹೋಲುವ ನಕಲಿ ಯುಆರ್‌ಎಲ್ ಸೃಷ್ಟಿಸಿ ಸಾರ್ವಜನಿಕರನ್ನು ಹೆದರಿಸುತ್ತಿದ್ದ ಈ ಜಾಲವನ್ನು ಭೇದಿಸಲು ದೇಶದ 16 ರಾಜ್ಯಗಳ 80ಕ್ಕೂ ಹೆಚ್ಚು ಸ್ಥಳಗಳಲ್ಲಿ ಗುರುವಾರ ಏಕಕಾಲಕ್ಕೆ ಶೋಧ ಕಾರ್ಯ ನಡೆಸಲಾಗಿದೆ.

ಸಿಬಿಐ ಅಧಿಕಾರಿಗಳು ಆಪರೇಷನ್ ಚಕ್ರ-4 ಅಡಿಯಲ್ಲಿ 60ಕ್ಕೂ ಹೆಚ್ಚು ವಿಶೇಷ ತನಿಖಾ ತಂಡಗಳನ್ನು ರಚಿಸಿ ಈ ಕಾರ್ಯಾಚರಣೆ ಕೈಗೊಂಡಿದ್ದಾರೆ. ಪಂಜಾಬ್ ಮತ್ತು ಗುಜರಾತ್‌ನಿಂದ ಹಿಡಿದು ಈಶಾನ್ಯದ ಅಸ್ಸಾಂ ಮತ್ತು ಮಣಿಪುರದವರೆಗೆ ಹರಡಿದ್ದ ಈ ಜಾಲವು ದೇಶಾದ್ಯಂತ ಕನಿಷ್ಠ 200ಕ್ಕೂ ಹೆಚ್ಚು ಸೈಬರ್ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಿಗಳು ಸಾರ್ವಜನಿಕರಿಂದ ಸುಲಿಗೆ ಮಾಡಲು ಡಿಜಿಟಲ್ ಅರೆಸ್ಟ್ ಎಂಬ ಅತ್ಯಂತ ಅಪಾಯಕಾರಿ ತಂತ್ರವನ್ನು ಬಳಸುತ್ತಿದ್ದಾರೆ. ವಂಚಕರು ತಾವೂ ಪೊಲೀಸ್ ಅಧಿಕಾರಿಗಳು, ಕೇಂದ್ರೀಯ ತನಿಖಾ ಸಂಸ್ಥೆಗಳ ಅಧಿಕಾರಿಗಳು ಅಥವಾ ನ್ಯಾಯಾಂಗದ ಅಧಿಕಾರಿಗಳು ಎಂದು ಸುಳ್ಳು ಹೇಳಿ ಸಂತ್ರಸ್ತರನ್ನು ಸಂಪರ್ಕಿಸುತ್ತಾರೆ. ನೀವು ಕ್ರಿಮಿನಲ್‌ ಚಟುವಟಿಕೆಯಲ್ಲಿ ಭಾಗಿಯಾಗಿದ್ದೀರಿ ಎಂದು ಹೆದರಿಸಿ, ಬಂಧನ ಅಥವಾ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಭಾರಿ ಮೊತ್ತದ ಹಣವನ್ನು ಪಾವತಿಸುವಂತೆ ಒತ್ತಾಯಿಸುತ್ತಾರೆ.

ಈ ಇಡೀ ಹಗರಣದ ಕೇಂದ್ರಬಿಂದು ಭಾರತದ ಸುಪ್ರೀಂ ಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ನಂತೆ ಕಾಣುವ ನಕಲಿ ಡೊಮೇನ್ ಆಗಿದೆ ಎಂದು ಸಿಬಿಐ ತಿಳಿಸಿದೆ.

‘ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸಂತ್ರಸ್ತರನ್ನು ನಂಬಿಸಲು ವಂಚಕರು ಈ ನಕಲಿ ಜಾಲತಾಣವನ್ನು ಬಳಸುತ್ತಿದ್ದರು. ಈ ಕುರಿತು ಭಾರತೀಯ ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಿಯಿಂದ ಬಂದ ಅಧಿಕೃತ ದೂರಿನ ಆಧಾರದ ಮೇಲೆ ಸಿಬಿಐ ಎಫ್‌ಐಆ‌ರ್ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು’ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment