Thursday, December 25, 2025
Google search engine
Homeದೇಶಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ: ಬೆಂಗಳೂರಿಗೆ 3ನೇ ಸ್ಥಾನ!

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ: ಬೆಂಗಳೂರಿಗೆ 3ನೇ ಸ್ಥಾನ!

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಶೇ.93.66 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ದೇಶದಲ್ಲೇ ಅತೀ ಹೆಚ್ಚು ಫಲಿತಾಂಶ ಪಡೆದ ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮೂರನೇ ಸ್ಥಾನ ಪಡೆದಿದೆ.

ಮಂಗಳವಾರ ಸಿಬಿಎಸ್ ಇ 10ನೇ ತರಗತಿ ಫಲಿತಾಂಶ (CBSE Class 10 Result 2025) ಪ್ರಕಟವಾಗಿದ್ದು, ಶೇ.93.66ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ 0.06ರಷ್ಟು ಹೆಚ್ಚು ಉತ್ತಮ ಫಲಿತಾಂಶ ಬಂದಿದೆ.

ಈ ಬಾರಿಯ ಫಲಿತಾಂಶದಲ್ಲೂ ಶೇ.95ರಷ್ಟು ವಿದ್ಯಾರ್ಥಿನಿಯರು ಪಾಲಾಗುವ ಮೂಲಕ ಬಾಲಕಿಯರೇ ಮೇಲುಗೈ ಸಾಧಿಸಿದ್ದರೆ, ಶೇ.92.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಫೆಬ್ರವರಿ 15ರಿಂದ ಮಾರ್ಚ್ 18, 2025ರವರೆಗೆ ದೇಶಾದ್ಯಂತ ಹಾಗೂ ವಿದೇಶದ ಕೆಲವು ಸ್ಥಳಗಳಲ್ಲಿ ಪರೀಕ್ಷೆ ನಡೆದಿದ್ದು, 2,371,929 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 2,221,636 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕೇರಳದ ತ್ರಿವೆಂಡ್ರಂ  ಅತೀ ಹೆಚ್ಚು ಫಲಿತಾಂಶ ಪಡೆದು ಮೊದಲ ಸ್ಥಾನ ಪಡೆದಿದ್ದರೆ, ವಿಜಯವಾಡ, ಬೆಂಗಳೂರು, ಚೆನ್ನೈ ಮತ್ತು ಪುಣೆ ಟಾಪ್ 5 ನಗರಗಳಲ್ಲಿ ಕ್ರಮವಾಗಿ ನಂತರದ ಸ್ಥಾನಗಳನ್ನು ಪಡೆದಿದೆ. 84.14ರಷ್ಟು ಫಲಿತಾಂಶ ಪಡೆದ ಗುವಾಹತಿ ಕೊನೆಯ ಸ್ಥಾನಕ್ಕೆ ಕುಸಿದಿದೆ.

ಬೆಂಗಳೂರಿನಲ್ಲಿ ಶೇ.91.64ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು ಶೇ.85.70ರಷ್ಟು ಪಾಸಾಗಿ ಮೇಲುಗೈ ಸಾಧಿಸಿದ್ದಾರೆ. ಕಳೆದ ವರ್ಷ ಬೆಂಗಳೂರು 87.98ರಷ್ಟು ಫಲಿತಾಂಶ ಪಡೆದಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments