Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ವಿಮಾನಯಾನ ದರ ಮಿತಿ ಆದೇಶ ವಾಪಸ್: ಕೇಂದ್ರ ಸರ್ಕಾರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು

ನವದೆಹಲಿ: ಕಳೆದ ವರ್ಷ ಇಂಡಿಗೋ ವಿಮಾನಗಳ ಹಾರಾಟದಲ್ಲಿ ಭಾರೀ ಅಡಚಣೆ ಉಂಟಾದ ಹಿನ್ನೆಲೆಯಲ್ಲಿ ವಿಧಿಸಿದ್ದ ದೇಶೀಯ ವಿಮಾನ ದರಗಳ ಮೇಲಿನ ತಾತ್ಕಾಲಿಕ ಶುಲ್ಕ ಮಿತಿಗಳನ್ನು ಕೇಂದ್ರ ಸರ್ಕಾರ ಇದೀಗ ತೆಗೆದು ಹಾಕಿದೆ.

ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ ಆದೇಶ ಹೊರಡಿಸಿದ್ದು, ವಿಮಾನ ದರ ಮಿತಿಗಳನ್ನು ತೆಗೆದುಹಾಕಿರುವ ಆದೇಶ ಸೋಮವಾರದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದೆ.

ಕಳೆದ ಡಿಸೆಂಬರ್‌ನಲ್ಲಿ ಇಂಡಿಗೋ ವಿಮಾನಗಳ ಹಾರಾಟದಲ್ಲಿ ಭಾರೀ ಪ್ರಮಾಣದ ಅಡಚಣೆಯಾದ ಸಂದರ್ಭದಲ್ಲಿ ಕೆಲವು ವಿಮಾನಯಾನ ಸಂಸ್ಥೆಗಳು ಟಿಕೆಟ್‌ ದರಗಳನ್ನು ಗಣನೀಯ ಪ್ರಮಾಣದಲ್ಲಿ ಏರಿಸಿದ್ದವು. ಇದರಿಂದ ಪ್ರಯಾಣಿಕರಿಗೆ ತೀವ್ರ ಹೊರೆಯಾಗಿ, ತೊಂದರೆ ಅನುಭವಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ನಾಗರಿಕ ವಿಮಾನಯಾನ ಸಚಿವಾಲಯ ಟಿಕೆಟ್‌ ದರ ಏರಿಕೆಗೆ ಕಡಿವಾಣ ಹಾಕಿತ್ತು.

‘ಜವಾಬ್ದಾರಿಯುತವಾಗಿ ವರ್ತಿಸಿ’: ದೇಶೀಯ ಆರ್ಥಿಕ ವಿಮಾನ ದರಗಳ ಮೇಲಿನ ದೂರ ಆಧರಿತ ಮಿತಿಗಳು 7,500 (500 ಕಿ.ಮೀ.ಗಿಂತ ಕಡಿಮೆ) ರೂ.ಯಿಂದ 18,000 (1,500 ಕಿ.ಮೀ.ಗಿಂತ ಹೆಚ್ಚು) ರೂ.ವರೆಗಿದ್ದವು. ಆದರೆ ಇದೀಗ ಪಶ್ಚಿಮ ಏಷ್ಯಾ ಯುದ್ಧದಿಂದಾಗಿ ವಿಮಾನಯಾನ ಸಂಸ್ಥೆಗಳು ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಕಾರ್ಯಾಚರಣೆಯ ಅಡಚಣೆಗಳನ್ನು ಎದುರಿಸುತ್ತಿವೆ. ಈ ಸಮಯದಲ್ಲಿ ಕೇಂದ್ರ ಸರ್ಕಾರ ವಿಮಾನಯಾನ ಸಂಸ್ಥೆಗಳ ನೆರವಿಗೆ ಬಂದಿದೆ. ಪ್ರಸ್ತುತ ಆದೇಶದಲ್ಲಿ, ವಿಮಾನಯಾನ ಸಂಸ್ಥೆಗಳು ಬೆಲೆಯ ವಿಚಾರದಲ್ಲಿ ಶಿಸ್ತು ಪಾಲಿಸಿ, ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದೂ ಸೂಚನೆ ನೀಡಿದೆ.

ದರಗಳು ಸಮಂಜಸ, ಪಾರದರ್ಶಕ ಮತ್ತು ಮಾರುಕಟ್ಟೆ ಪರಿಸ್ಥಿತಿಗಳಿಗೆ ಅನುಗುಣವಾಗಿರುವುದನ್ನು ವಿಮಾನಯಾನ ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು. ಪ್ರಯಾಣಿಕರ ಹಿತಾಸಕ್ತಿಗಳ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರದಂತೆ ಗಮನಹರಿಸಬೇಕು ಎಂದು ಸಚಿವಾಲಯ ಸಲಹೆ ಕೊಟ್ಟಿದೆ.

ವಿಶೇಷವಾಗಿ ಗರಿಷ್ಠ ಬೇಡಿಕೆ, ಅಡೆತಡೆಗಳು ಅಥವಾ ತುರ್ತು ಪರಿಸ್ಥಿತಿಗಳ ಅವಧಿಯಲ್ಲಿ ದರಗಳಲ್ಲಿ ಅತಿಯಾದ ಏರಿಕೆಯ ನಿದರ್ಶನಗಳನ್ನು ಗಮನಿಸಿದರೆ ಅಂಥವುಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಸಚಿವಾಲಯ ಎಚ್ಚರಿಸಿದೆ.

ಇತ್ತೀಚಿಗೆ ರಾಜೀನಾಮೆ ನೀಡಿದ್ದ ಇಂಡಿಗೋ ಸಿಇಒ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಭಾರಿ ಕಾರ್ಯಾಚರಣೆಯ ತೊಡಕುಗಳನ್ನು ಎದುರಿಸಿದ ಮೂರು ತಿಂಗಳ ನಂತರ ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ಇತ್ತೀಚಿಗೆ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

ವಿನಿಮಯ ಕೇಂದ್ರಗಳಿಗೆ ಸಲ್ಲಿಸಿದ ಫೈಲಿಂಗ್‌ನಲ್ಲಿ ಇಂಟರ್‌ಗ್ಲೋಬ್ ಏವಿಯೇಷನ್‌ನ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಭಾಟಿಯಾ ಏರ್‌ಲೈನ್‌ನ ನಿರ್ವಹಣೆಯ ಜವಾಬ್ದಾರಿಯನ್ನು ಮಧ್ಯಂತರ ಆಧಾರದ ಮೇಲೆ ವಹಿಸಿಕೊಂಡಿದ್ದಾರೆ ಎಂದು ಏರ್‌ಲೈನ್ ತಿಳಿಸಿತ್ತು. ತಕ್ಷಣದಿಂದಲೇ ಜಾರಿಗೆ ಬರುವಂತೆ ಪೀಟರ್ ಎಲ್ಬರ್ಸ್ ಇಂಡಿಗೋ ಸಿಇಒ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಪೀಟರ್ ಸಂಸ್ಥೆಗೆ ನೀಡಿದ ಕೊಡುಗೆ ಮತ್ತು ಸೇವೆಗೆ ನಿರ್ದೇಶಕರ ಮಂಡಳಿಯು ಧನ್ಯವಾದಗಳನ್ನು ಅರ್ಪಿಸುತ್ತದೆ ಮತ್ತು ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಸುತ್ತದೆ ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment