ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಹಾಗೂ ಜನರಲ್ ಅನಿಲ್ ಚೌಹಾಣ್ ಅವರ ಅಧಿಕಾರಾವಧಿಯನ್ನು 8 ತಿಂಗಳ ಕಾಲ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.
ಅನಿಲ್ ಚೌಹಾಣ್ ಅವರ ರಕ್ಷಣಾ ಮುಖ್ಯಸ್ಥರಾಗಿ ಅವಧಿ ಸೆಪ್ಟೆಂಬರ್ 30ಕ್ಕೆ ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುಂದಿನ ವರ್ಷ ಮೇ ತಿಂಗಳ ವರೆಗೂ ಮುಂದೂಡಿದೆ.
ಕೇಂದ್ರ ರಕ್ಷಣಾ ಸಚಿವಾಲಯ ಅನಿಲ್ ಚೌಹಾಣ್ ಅವರನ್ನು ಮುಂದುವರಿಸುವ ಬಗ್ಗೆ ಒಪ್ಪಿಗೆ ಸೂಚಿಸಿದ್ದು, ಮುಂದಿನ ತಿಂಗಳು ಮೇ 30ರವರೆಗೆ ವಿಸ್ತರಿಸಿ ಬುಧವಾರ ಆದೇಶ ಹೊರಡಿಸಿದೆ.
ಅನಿಲ್ ಚೌಹಾಣ್ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರಾಗಿ 2022 ಸೆಪ್ಟೆಂಬರ್ 30ರಂದು ನೇಮಕಗೊಂಡಿದ್ದರು.


