ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಘೋಷಿಸಲಿದೆ.
ಫೆಬ್ರವರಿ 15ರಂದು ದಹಲಿ 7ನೇ ವಿಧಾನಸಭೆಯ ಅವಧಿ ಮುಕ್ತಾಯಗೊಳ್ಳಲಿದೆ. ಇದಕ್ಕೂ ಮುನ್ನ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಚುನಾವಣಾ ದಿನಾಂಕ ಘೋಷಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸತತ ಮೂರನೇ ಬಾರಿ ಅಧಿಕಾರ ಹಿಡಿಯುವ ಉಮೇದಿನಲ್ಲಿದ್ದರೆ, ಕೇಂದ್ರದಲ್ಲಿರುವ ಆಡಳಿತಾರೂಢ ಬಿಜೆಪಿ ಹೇಗಾದರೂ ಮಾಡಿ ರಾಜಧಾನಿಯಲ್ಲಿ ಅಧಿಕಾರ ಹಿಡಿಯುವ ಕಸರತ್ತು ಆರಂಭಿಸಿದೆ.
ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಇಂಡಿಯಾ ಮೈತ್ರಿಕೂಟದಿಂದ ಹೊರಬಂದು ಪ್ರತ್ಯೇಕವಾಗಿ ಚುನಾವಣೆ ಎದುರಿಸುತ್ತಿದೆ. ಈಗಾಗಲೇ ಆಪ್, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಚುನಾವಣೆ ಘೋಷಣೆಗೂ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಘೋಷಿಸಿ ಅಚ್ಚರಿ ಮೂಡಿಸಿವೆ.